Monday 29th, April 2024
canara news

ಬಿ.ಸಿ.ರೋಡ್-ಅಡ್ಡಹೊಳೆ; ಚತುಷ್ಪಥ ಕಾಂಕ್ರೀಟ್ ಕಾಮಗಾರಿಗೆ ಚಾಲನೆ

Published On : 24 May 2017   |  Reported By : Canaranews Network

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಶಿರಾಡಿ ಘಾಟಿಯ ಅಡ್ಡಹೊಳೆಯಿಂದ ಬಿ.ಸಿ.ರೋಡ್ ವರೆಗಿನ ಸುಮಾರು ೬೩ ಕಿ.ಮೀ. ದೂರದ ಮಾರ್ಗವನ್ನು ಚತುಷ್ಪಥ ಕಾಂಕ್ರೀಟ್ ರಸ್ತೆಯನ್ನಾಗಿ ಪರಿವರ್ತಿಸುವ ಕಾಮಗಾರಿಗೆ ಚಾಲನೆ ದೊರೆತಿದೆ. ಬೆಂಗಳೂರು-ಮಂಗಳೂರು ನೇರ ಸಂಪರ್ಕ ಕಲ್ಪಿಸುವ ಈ ರಾ.ಹೆ. ಯಲ್ಲಿ ಅಡ್ಡಹೊಳೆಯಿಂದ ಬಿ.ಸಿ.ರೋಡ್ ವರೆಗಿನ ದ್ವಿಪಥ ರಸ್ತೆಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂಬುದು ಬಹುದಿನಗಳ ಬೇಡಿಕೆಯಾಗಿದೆ.

ಅದರಂತೆ ಈ ಹೆದ್ದಾರಿಯನ್ನು ವಿಸ್ತರಿಸುವ ಕಾಮಗಾರಿಗೆ ಚಾಲನೆ ದೊರೆತಿದ್ದು, ಮುಂದಿನ ೨ ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಬೇಕಿದೆ. ಸದ್ಯ ಗುಂಡ್ಯದಿಂದ ಉಪ್ಪಿನಂಗಡಿವರೆಗೆ ರಸ್ತೆಗೆ ಹೊಂದಿಕೊಂಡಿರುವ ಮರಗಳ ತೆರವು, ವಿದ್ಯುತ್ ಕಂಬಗಳು, ನೀರು ಹಾಗೂ ಇತರ ಕೊಳವೆ ಮಾರ್ಗಕ್ಕೆ ಪರ್ಯಾಯ ವ್ಯವಸ್ಥೆ ನಡೆಯುತ್ತಿದೆ.

More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here