Friday 9th, May 2025
canara news

ಅಕ್ರಮ ಮರಳು ಅಡ್ಡೆಗೆ ಎಸಿ ನೇತೃತ್ವದಲ್ಲಿ ದಾಳಿ; ೧೨ ಹಿಟಾಚಿ ಮುಟ್ಟುಗೋಲು

Published On : 24 May 2017   |  Reported By : Canaranews Network


ಮಂಗಳೂರು: ದ.ಕ.ಜಿಲ್ಲೆಯ ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ಕುಮಾರಧಾರಾ ನದಿ ಬದಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಪುತ್ತೂರು ಉಪವಿಭಾಗಾಧಿಕಾರಿಗಳ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರ ಸಂಜೆ ದಾಳಿ ನಡೆಸಿ ಅಕ್ರಮ ಮರಳುಗಾರಿಕೆ ಸ್ಥಳದಲ್ಲಿದ್ದ ೧೨ ಲಾರಿ ಹಾಗೂ ಹಿಟಾಚಿಯೊಂದನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಚಾರ್ವಾಕಾದ ಕುಮಾರಧಾರಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿ ಡಾ. ರಘುನಂದನ್ ಮೂರ್ತಿ ಅವರು ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ ಹಾಗೂ ಕಡಬ ಪೊಲೀಸರೊಂದಿಗೆ ದಾಳಿ ಕಾರ್ಯಾಚರಣೆ ನಡೆಸಿದ್ದರು. ದಾಳಿ ಸಂದರ್ಭ ಮರಳು ತುಂಬಿಸಲು ಸ್ಥಳದಲ್ಲಿ ನಿಲ್ಲಿಸಲಾಗಿದ್ದ ೧೨ ಲಾರಿ ಮತ್ತು ಹಿಟಾಚಿಯನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಳ್ಳಲು ಸಂಬಂಧಪಟ್ಟ ಇಲಾಖೆಗೆ ಸೂಚಿಸಲಾಗಿದೆ ಎನ್ನಲಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here