Friday 9th, May 2025
canara news

ಗಾಂಜಾ ಸಾಗಿಸಿ, ಸಿಕ್ಕಿಬಿದ್ದ ಮಂಗಳೂರಿನ ಖದೀಮರು

Published On : 25 May 2017   |  Reported By : Canaranews Network


ಮಂಗಳೂರು: ಒಡಿಶಾದಿಂದ ಮಂಗಳೂರಿಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಕೇಂದ್ರ ಉಪ ವಿಭಾಗದ ಎಸಿಪಿ ಉದಯ ನಾಯಕ್ ನೇತೃತ್ವದ ಪೊಲೀಸ್ ತಂಡ ಗುರುವಾರ ಬಂಧಿಸಿದೆ. ಆರೋಪಿಗಳಿಂದ ಮೊಬೈಲ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ.

ಒಡಿಶಾದ ಶಾಂತನು ಕುಮಾರ್ ಶಾಹು (20) ಹಾಗೂ ಪಣಂಬೂರು ಮೀನಕಳಿಯದ ವಿಕ್ರಮ್ ಯಾನೆ ವಿಕ್ರಮ್ ಯಾನೆ ಜಯರಾಮ್ (27) ಬಂಧಿತ ಆರೋಪಿಗಳು.ಆರೋಪಿಗಳನ್ನು ಬುಧವಾರ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಸಂದರ್ಭ ಸೆರೆ ಹಿಡಿಯಲಾಗಿದ್ದು, ಬಂಧಿತರಿಂದ 2.5 ಲಕ್ಷ ರೂ. ಮೌಲ್ಯದ 5 ಕೆಜಿ ಗಾಂಜಾ, 12 ಸಾವಿರ ಮೌಲ್ಯದ ಎರಡು ಮೊಬೈಲ್, ಗಾಂಜಾ ತೂಕ ಮಾಡುವ ಮಾಪಕ, ರೂ.500 ನಗದು ಹಣ ಹಾಗೂ ಗಾಂಜಾ ಸಾಗಾಟಕ್ಕೆ ಬಳಸಿದ್ದ ಅಟೋ ರಿಕ್ಷಾ ಸೇರಿದಂತೆ ಸುಮಾರು 4,37,500 ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು ಕೇಂದ್ರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಉದಯ ನಾಯಕ್ ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬರ್ಕೆ ಠಾಣೆಯ ಇನ್ಸ್ಪೆಕ್ಟರ್ ರಾಜೇಶ್ ಎ.ಕೆ. ಹಾಗೂ ಬರ್ಕೆ ಠಾಣೆಯ ಅಪರಾಧ ವಿಭಾಗದ ಪಿ.ಎಸ್.ಐ ನರೇಂದ್ರ ಮತ್ತು ಎ.ಎಸ್.ಐ ಪ್ರಕಾಶ್, ಸಿಬ್ಬಂದಿಗಳಾದ ಗಣೇಶ್, ರಾಜೇಶ್ ಅತ್ತಾವರ, ಕಿಶೋರ್ ಕೋಟ್ಯಾನ್, ಕಿಶೋರ್ ಪೂಜಾರಿ, ನಾಗರಾಜ, ಮಹೇಶ್ ಪಾಟೀಲ್ ಮುಂತಾದವರು ಪಾಲ್ಗೊಂಡಿದ್ದರು.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here