Friday 19th, July 2024
canara news

ಜ್ಯೂಸ್ ಅಂಗಡಿ ಮಾಲಕನ ಮೇಲೆ ಚೂರಿ ಇರಿತ

Published On : 25 May 2017   |  Reported By : Canaranews Network


ಮಂಗಳೂರು: ಅಂಗಡಿ ಮಾಲಕರಿಗೆ ೫ ಮಂದಿಯ ತಂಡ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಕಡವಿನ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಪಾವೂರು ನಿವಾಸಿ ಅಬ್ದುಲ್ ರಹಿಮಾನ್ ಕೊಲೆಯತ್ನಕ್ಕೆ ಒಳಗಾದವು. ಅಬ್ಧುಲ್ ರಹಿಮಾನ್ ಪಾವೂರು ಕಡವಿನಲ್ಲಿ ಜ್ಯೂಸ್ ಅಂಗಡಿ ಹೊಂದಿದ್ದರು. ಬುಧವಾರ ರಾತ್ರಿ ಅಂಗಡಿ ಬಾಗಿಲು ಮುಚ್ಚುತ್ತಿದ್ದ ವೇಳೆ ಓಮ್ನಿ ಕಾರಿನಲ್ಲಿ ಬಂದ ಐವರ ತಂಡ ಅಬ್ದುಲ್ ಅವರ ತಲೆ, ಕಾಲು ಹಾಗೂ ಕೈ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.

ಇವರು ಸ್ಥಳೀಯವಾಗಿ ಗಾಂಜಾ ವ್ಯಸನಿಗಳ ಉಪಟಳದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದರೆಂಬ ಕಾರಣಕ್ಕಾಗಿ ತಂಡ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಕುರಿತಂತೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
More News

ಡ್ರಾಮಾ ಜೂನಿಯರ್ ವಿಜೇತೆಗೆ ವಿಪ್ರ ಸನ್ಮಾನ
ಡ್ರಾಮಾ ಜೂನಿಯರ್ ವಿಜೇತೆಗೆ ವಿಪ್ರ ಸನ್ಮಾನ
 ಬೆಳುವಾಯಿ ಮರಿಯಮ್ ನಿಕೇ ತನ್ ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ
ಬೆಳುವಾಯಿ ಮರಿಯಮ್ ನಿಕೇ ತನ್ ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ
ಅಂಡಮಾನ್‍ನಲ್ಲಿ ಸಂಭ್ರಮಿಸಲ್ಪಟ್ಟ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ
ಅಂಡಮಾನ್‍ನಲ್ಲಿ ಸಂಭ್ರಮಿಸಲ್ಪಟ್ಟ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ

Comment Here