Friday 9th, May 2025
canara news

ಕಲ್ಲಡ್ಕದಲ್ಲಿ ಮುಸ್ಲಿಂ ಯುವಕರ ಮೇಲೆ ಹಿಂದೂಗಳ ಹಲ್ಲೆ

Published On : 27 May 2017   |  Reported By : Canaranews Network


ಮಂಗಳೂರು: ದ.ಕ.ಜಿಲ್ಲೆಯ ಕಲ್ಲಡ್ಕದಲ್ಲಿ ಶುಕ್ರವಾರ ಮಧ್ಯಾಹ್ನ ಜುಮಾ ನಮಾಝ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮೂವರು ಮುಸ್ಲಿಂ ಯುವಕರ ಮೇಲೆ ಮೂವರು ಹಿಂದೂ ಯುವಕರು ಹಲ್ಲೆ ನಡೆಸಿ, ಒಬ್ಬನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಕಲ್ಲಡ್ಕದ ಮಸೀದಿಯೊಂದರಲ್ಲಿ ಮಧ್ಯಾಹ್ನ ನಮಾಝ್ ಮುಗಿಸಿ 1.30ರ ಸುಮಾರಿಗೆ ಮನೆಗೆ ಮರಳುತ್ತಿದ್ದ ಮುಹಮ್ಮದ್ ಆಶಿರ್ (21) ಎನ್ನುವರಿಗೆ ಚೂರಿ ಇರಿದು ಹಾಗೂ ಈತನ ಜತೆಗಿದ್ದ ಜಮೀಲ್ (21) ಮತ್ತು ನಾಸಿರ್ (18) ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ.ನಮಾಝ್ ಮುಗಿಸಿ 1.30ರ ಸುಮಾರಿಗೆ ಮನೆಗೆ ಮರಳುತ್ತಿದ್ದಾಗ ಅವರನ್ನು ಕಾರಿನಲ್ಲಿ ಹಿಂಬಾಲಿಸಿ ಬಂದ ಯುವಕರ ತಂಡ ಹಲ್ಲೆ ನಡೆಸಿ, ಚೂರಿಯಿಂದ ಇರಿದಿದೆ. ಹಾಶಿರ್ ನ ಎಡ ಭುಜಕ್ಕೆ ಗಾಯವಾಗಿದ್ದು, ತುಂಬೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೊಲೆ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದು, ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಕಲ್ಲಡ್ಕದ ಮಿಥುನ್ ಆತನ ಸಹಚರರಾದ ಯತಿನ್ ಮತ್ತು ಅಮಿತ್ ಕೃತ್ಯ ಎಸಗಿದ್ದಾರೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿರುವ ಪೊಲೀಸರು,

ಹಲವು ತಂಡಗಳಲ್ಲಿ ಶೋಧ ನಡೆಸುತ್ತಿದ್ದಾರೆ. ಚೂರಿ ಇರಿತದ ವಿಷಯ ತಿಳಿಯುತ್ತಿದ್ದಂತೆ ಕಲ್ಲಡ್ಕ ಪಟ್ಟಣದಲ್ಲಿ ಜನ ಜಮಾಯಿಸಿದ್ದಾರೆ. ಪಟ್ಟಣದ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು ಮುಂಜಾಗೃತ ಕ್ರಮವಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆ ಎಸ್ಸೈ ಎ.ಕೆ.ರಕ್ಷಿತ್ ಹಾಗೂ ಅವರ ಸಿಬ್ಬಂದಿ ದೌಡಾಯಿಸಿ ಬಂದೋಬಸ್ತ್ ಕಲ್ಪಿಸಿದ್ದಾರೆ.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here