Saturday 20th, April 2024
canara news

ಮಂಗಳೂರು ಪೊಲೀಸ್ ಕಮಿಷನರ್ ನೇಮಕ ರದ್ದು, ಖಾದರ್ ಕೈವಾಡ?

Published On : 27 May 2017   |  Reported By : Canaranews Network


ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಎಂ ಚಂದ್ರಶೇಖರ್ ಜಾಗಕ್ಕೆ ನೇಮಕವಾಗಿದ್ದ ಎನ್ ಸತೀಶ್ ಕುಮಾರ್ ವರ್ಗಾವಣೆಯನ್ನು ರದ್ದು ಪಡಿಸಲಾಗಿದೆ. ಇದಕ್ಕೆ ಸಚಿವ ಯುಟಿ ಖಾದರ್ ಕಾರಣ ಎನ್ನಲಾಗಿದೆ. ಆಹಾರ ಸಚಿವ ಯು. ಟಿ. ಖಾದರ್ ಹಾಗೂ ಕಾಂಗ್ರೆಸ್ ಶಾಸಕರು ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದ ಸತೀಶ್ ಕುಮಾರ್ ಮಂಗಳೂರಿಗೆ ಬರುವುದು ಬೇಡವೆಂದು ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದನ್ನು ಸಚಿವ ಖಾದರ್ ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದರು ಎಂದೂ ಹೇಳಲಾಗಿದೆ.

ಒಟ್ಟಿನಲ್ಲಿ ಸತೀಶ್ ಕುಮಾರ್ ಅಧಿಕಾರ ಸ್ವೀಕರಿಸುವುದು ಮಾತ್ರ ರದ್ದಾಗಿದೆ.ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸತೀಶ್ ಕುಮಾರ್ ಸೇವೆ ಸಲ್ಲಿಸಿದ್ದರು. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಬಗ್ಗೆ ಜನರಿಂದ ದೂರುಗಳಿದ್ದವು. ದೇಶ, ವಿದೇಶಗಳಲ್ಲಿ ಮಂಗಳೂರಿಗೆ ಕೆಟ್ಟ ಹೆಸರು ತಂದ ಚರ್ಚ್ ದಾಳಿ ಪ್ರಕರಣ ಹಾಗೂ ಅದರ ಬೆನ್ನಿಗೇ ಚರ್ಚ್ ನಲ್ಲಿ ಪ್ರಾರ್ಥನಾ ನಿರತರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಪ್ರಕರಣಗಳು ಸತೀಶ್ ಕುಮಾರ್ ಅವಧಿಯಲ್ಲೇ ನಡೆದಿದ್ದವು. ಆದ್ದರಿಂದ ಅವರ ಕಾರ್ಯ ವೈಖರಿಯ ಕುರಿತು ತೀವ್ರ ಆ ಸಂದರ್ಭದಲ್ಲಿ ತೀವ್ರ ಅಸಮಧಾನ ವ್ಯಕ್ತವಾಗಿತ್ತು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here