Tuesday 19th, March 2024
canara news

ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಉತ್ಸವ ಸಮಾರೋಪ

Published On : 29 May 2017   |  Reported By : Canaranews Network


ಮಂಗಳೂರು: ಕಳೆದ ಮೂರು ದಿನಗಳಿಂದ ದ.ಕ.ಜಿಲ್ಲೆಯ ಸಸಿಹಿತ್ಲುವಿನಲ್ಲಿ ನಡೆಯುತ್ತಿದ್ದ 'ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಉತ್ಸವ'ವು ಭಾನುವಾರ ತೆರೆ ಕಂಡಿತು. ಕಿಕ್ಕಿರಿದು ಸೇರಿದ್ದ ಅಭಿಮಾನಿಗಳು ಸರ್ಫರ್ಗಳನ್ನು ಹುರಿದುಂಬಿಸುತ್ತಿದ್ದ ದೃಶ್ಯಗಳು ಸಸಿಹಿತ್ಲು ಬೀಚ್ನಲ್ಲಿ ಕಂಡುಬಂದವು.

ಕೋವಳಂ ಸರ್ಫರ್ ರಮೇಶ್ ಮತ್ತು ಅಜೀಶ್ ಅಲಿ ಅವರು ಕ್ರಮವಾಗಿ ಜೂನಿಯರ್ ಮತ್ತು 14ರ ವಯೋಮಿತಿಯ ವಿಭಾಗದ ಪ್ರಶಸ್ತಿಗಳನ್ನು ಗೆದ್ದುಕೊಂಡರು.ಮುಕ್ತ ವಿಭಾಗದ ವಿಜೇತರು 50 ಸಾವಿರ ರೂ. ಹಾಗೂ ರನ್ನರ್ 25 ಸಾವಿರ ರೂ. ಬಹುಮಾನ ಪಡೆದರು. ಜೂನಿಯರ್ ರಾಷ್ಟ್ರಮಟ್ಟದ ವಿಜೇತರು ತಲಾ 25 ಸಾವಿರ ರೂ. ಹಾಗೂ ಎರಡು ಹಾಗೂ ಮೂರನೆ ಸ್ಥಾನ ಪಡೆದ ಸರ್ಫರ್ಗಳು ಕ್ರಮವಾಗಿ 15 ಸಾವಿರ ಹಾಗೂ 10 ಸಾವಿರ ನಗದು ಬಹುಮಾನ ಪಡೆದರು.14 ವರ್ಷ ವಯೋಮಿತಿ ವಿಭಾಗದಲ್ಲಿ ಪ್ರಥಮ ವಿಜೇತರು 10 ಸಾವಿರ, ದ್ವಿತೀಯ 5 ಸಾವಿರ ಹಾಗೂ ತೃತೀಯ ಸ್ಥಾನ ಪಡೆದ ಸ್ಪರ್ಧಿ 3 ಸಾವಿರ ರೂ. ಬಹುಮಾನ ಗಳಿಸಿದರು.ಚೆನ್ನೈನ ಶೇಖರ್ ಪಿಚ್ಚೈ ಪುರುಷರ ಸ್ಟ್ಯಾಂಡ್ ಅಪ್ ಪೆಡಲ್ ರೇಸ್ನಲ್ಲಿ ವಿಜೇತರಾದರು. ತಮಿಳುನಾಡಿನ ವಿಘ್ನೇಶ್ ವಿಜಯ್ ಕುಮಾರ್ ಎರಡನೇ ಸ್ಥಾನ ಗಳಿಸಿದರೆ,

ಮಂಗಳೂರಿನ ಕಿಶೋರ್ ಕುಮಾರ್ 3ನೇ ಸ್ಥಾನಕ್ಕೆ ತೃಪ್ತಿಪಟ್ಟರು. ಮಾಸ್ಟರ್ಸ್ ವಿಭಾಗದಲ್ಲಿ ಚೆನ್ನೈನ ವೆಂಕಟ್ ಕೆ. ಹಾಗೂ ಮೂರ್ತಿ ಮೆಗವನ್ ಗಮನ ಸೆಳೆದರು. 30 ವರ್ಷ ಮೇಲ್ಪಟ್ಟವರ ಈ ವಿಭಾಗದಲ್ಲಿ ಈ ಇಬ್ಬರು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದರೆ, ಗೋವಾದ ಸಂದೀಪ್ ಸ್ಯಾಮ್ಯುಯೆಲ್ ಮೂರನೇ ಸ್ಥಾನ ಗಳಿಸಿದರು.16 ವರ್ಷ ವಯೋಮಿತಿ ವಿಭಾಗದಲ್ಲಿ ಕೋವಳಂನ ಅಜೇಶ್ ಅಲಿ ರಾಷ್ಟ್ರೀಯ ಚಾಂಪಿಯನ್ ಆಗಿ ಹೊರಹೊಮ್ಮಿದರು. ಸಂತೋಷ್ ಶಾಂತಕುಮಾರ್ ಹಾಗೂ ಶಿವರಾಜ್ ಬಾಬು ಎರಡು ಹಾಗೂ ಮೂರನೇ ಸ್ಥಾನ ಪಡೆದರು. ಸ್ಟಾರ್ ಕ್ರಿಕೆಟಿಗ ಜಾಂಟಿ ರೋಡ್ಸ್ ಹಾಗೂ ಕೆಲ ಸೆಲೆಬ್ರೆಟಿಗಳ ಆಗಮನ ಸ್ಪರ್ಧಿಗಳು ಮತ್ತು ಅಭಿಮಾನಿಗಳಿಗೆ ಖುಶಿ ನೀಡಿತು.




More News

 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಬ್ರಹ್ಮಕುಮಾರಿ ಸಂಸ್ಥೆಯ ಸಯನ್  ಸೆಂಟರ್‍ನಿಂದ ಮಹಿಳಾ ದಿನಾಚರಣೆ
ಬ್ರಹ್ಮಕುಮಾರಿ ಸಂಸ್ಥೆಯ ಸಯನ್ ಸೆಂಟರ್‍ನಿಂದ ಮಹಿಳಾ ದಿನಾಚರಣೆ
ಅನಿತಾ ಪಿ.ತಾಕೊಡೆ ಅವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತ್ತ್‍ನ ದತ್ತಿ ಪ್ರಶಸ್ತಿ
ಅನಿತಾ ಪಿ.ತಾಕೊಡೆ ಅವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತ್ತ್‍ನ ದತ್ತಿ ಪ್ರಶಸ್ತಿ

Comment Here