Friday 9th, May 2025
canara news

ದಾಖಲೆ ಮಾಡ್ತಾರಾ ರೋಹಿತ್ ಶರ್ಮಾ?

Published On : 30 May 2017   |  Reported By : Sudha Ujja


ಲಂಡನ್ : ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹತ್ತನೇ ಆವೃತ್ತಿಯಲ್ಲಿ ಪ್ರಶಸ್ತಿ ಗೆದ್ದಿದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅಂತರಾಷ್ಟ್ರೀಯ ಅಂಗಳದಲ್ಲಿ ಆಟವಾಡಲಿದ್ದಾರೆ.
ಹೋದ ವರ್ಷ ನ್ಯೂಜಿಲೆಂಡ್ ಎದುರಿನ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಗಾಯಗೊಂಡಿದ್ದ ರೋಹಿತ್ ಅವರು ಶಸ್ತ್ರಚಿಕಿತ್ಸೆಗೊಳಗಾಗಿ ವಿಶ್ರಾಂತಿ ಪಡೆದಿದ್ದರು. ಚೇತರಿಸಿಕೊಂಡ ಬಳಿಕ ಐಪಿಎಲ್ ಟೂರ್ನಿಯಲ್ಲಿ ಆಡಿದ್ದರು. ಅದಕ್ಕೂ ಮುನ್ನ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಎದುರಿನ ಸರಣಿಗಳಲ್ಲಿ ಅವರು ಆಡಿರಲಿಲ್ಲ. ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಎರಡು ದ್ವಿಶತಕ ಗಳಿಸಿರುವ ದಾಖಲೆಯು ರೋಹಿತ್ ಶರ್ಮಾ ಮೇಲಿದೆ.

 

ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಅಂಗವಾಗಿ ಮಂಗಳವಾರ ನಡೆಯಲಿರುವ ಬಾಂಗ್ಲಾ ಎದುರಿನ ಅಭ್ಯಾಸ ಪಂದ್ಯದಲ್ಲಿ ರೋಹಿತ್ ಆಡಲಿದ್ದಾರೆ. ಆದ್ರೆ ಎರಡನೇ ಅಭ್ಯಾಸ ಪಂದ್ಯದಲ್ಲಿ ರೋಹಿತ್ ಶಿಖನ್ ಧವನ್ ಜತೆಗೆ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here