Friday 9th, May 2025
canara news

ಪ್ರಾಕೃತಿಕ ವಿಕೋಪ ನಿರ್ವಹಣೆ;ಪ್ರತೀ ತಾಲೂಕಿಗೆ ೩೦ ಲಕ್ಷ ರೂ. ಬಿಡುಗಡೆ; ದ.ಕ.ಜಿಲ್ಲಾಧಿಕಾರಿ

Published On : 31 May 2017   |  Reported By : Canaranews Network


ಮಂಗಳೂರು: ಮಳೆಗಾಲದಲ್ಲಿ ಉಂಟಾಗಬಹುದಾದ ಪ್ರಾಕೃತಿಕ ದುರಂತ, ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲೆಯ ಪ್ರತೀ ತಾಲೂಕಿಗೆ ೩೦ ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಹೇಳಿದ್ದಾರೆ.

ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಳೆಗಾಲ ಸಿದ್ಧತಾ ಕಾರ್ಯಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡುತ್ತಿದ್ದರು. ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಪರಿಹಾರ ನೀಡಲು ೨೦ ಲಕ್ಷ ರೂ. ಹಾಗೂ ತುರ್ತು ಕಾಮಗಾರಿಗಳಿಗಾಗಿ ೧೦ ಲಕ್ಷ ರೂ . ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಠು ಅನುದಾನ ಬಿಡುಗಡೆ ಮಾಡಲಾಗುವುದು.

ಜಿಲ್ಲೆಗೆ ಪ್ರಾಕೃತಿಕ ವಿಕೋಪದಡಿ ೨ ಕೋ. ರೂ. ಹೆಚ್ಚುವರಿ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದವರು ಹೇಳಿದರು. ಜಿಲ್ಲೆಯ ಪ್ರತೀ ತಾಲೂಕಿನಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಸಭೆ ನಡೆಸಿ ಪ್ರಾಕೃತಿಕ ಹಾನಿಗಳ ನಿರ್ವಹಣೆಗೆ ಕ್ರಮ ಕೈಗೊಳ್ಳಲಿದೆ. ನೆರೆ, ನೀರು ನುಗ್ಗುವ ಪ್ರದೇಶಗಳನ್ನು ಮೊದಲೇ ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಎಚ್ಚರಿಸಿದರು




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here