Tuesday 30th, April 2024
canara news

ಕಡಲ್ಕೊರೆತ ತುರ್ತು ಕಾಮಗಾರಿಗೆ 5 ಕೋ.ರೂ.: ಸಚಿವ ಖಾದರ್

Published On : 31 May 2017   |  Reported By : Canaranews Network


ಮಂಗಳೂರು: ಮಳೆಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ಸೋಮೇಶ್ವರ, ಉಳ್ಳಾಲ ವ್ಯಾಪ್ತಿಯಲ್ಲಿ ಕಡಲ್ಕೊರೆತ ಸಮಸ್ಯೆ ಎದುರಾದರೆ ತುರ್ತು ನಿರ್ವಹಣೆಗಾಗಿ 5 ಕೋ.ರೂ.ಗಳ ಅನುದಾನ ಮೀಸಲಿರಿಸುವ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸುವಂತೆ ಆಹಾರ ಖಾತೆ ರಾಜ್ಯ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಗಾಲ ಸಿದ್ಧತೆ, ಕಡಲ್ಕೊರೆತ ನಿರ್ವಹಣೆ ಕುರಿತು ಅಧಿಕಾರಿಗಳ ಜತೆಗೆ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ರವಿವಾರ ನಡೆದ ವಿಶೇಷ ಸಭೆಯಲ್ಲಿ ಮಾತನಾಡಿದರು.

ಅಧಿಕಾರಿಯೇ ಹೊಣೆ
ಕಡಲ್ಕೊರೆತ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಸಂಬಂಧಿಸಿ ಈಗಾಗಲೇ ಎಡಿಬಿ ನೆರವಿನಿಂದ 223 ಕೋ.ರೂ. ಸಲಿರಿಸಿದ್ದು, ಕಾಮಗಾರಿಗಳು ತೀವ್ರಗತಿಯಲ್ಲಿ ನಡೆಯಬೇಕಿದೆ. ಈ ಸಂಬಂಧಿತ ಕಾಮಗಾರಿಯಲ್ಲಿ ಯಾವುದೇ ಲೋಪಗಳಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ವ್ಯತ್ಯಾಸಗಳಾದಲ್ಲಿ ಸಂಬಂಧಿತ ಅಧಿಕಾರಿಯನ್ನೇ ಹೊಣೆಗಾರರನ್ನಾಗಿಸಿ ಯೋಜನೆಯನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು.

ಸೋಮೇಶ್ವರ, ಉಳ್ಳಾಲ ವ್ಯಾಪ್ತಿಯಲ್ಲಿ ಈ ಬಾರಿ ಕಡಲ್ಕೊರೆತ ಸಮಸ್ಯೆ ಎದುರಾಗಧಿದಂತೆ ತುರ್ತು ಕಾಮಗಾರಿ ಕೈಗೊಳ್ಳಲು 5 ಕೋ.ರೂ. ಮೀಸಲಿರಿಸಬೇಕು ಎಂದರು. ಮಳೆಗಾಲದಲ್ಲಿ ಎಲ್ಲ ಇಲಾಖೆಗಳು ಸಿದ್ಧವಾಗಿರಬೇಕು. ಮೆಸ್ಕಾಂನ ವಾಹನದ ಒಂದೊಂದು ತಂಡಗಳು ನಿಗದಿತ ಸ್ಥಳದಲ್ಲಿ 24 ಗಂಟೆ ಕೆಲಸ ಮಾಡಬೇಕಿದೆ. ನಿಗದಿತ ಸ್ಥಳದಲ್ಲಿ ಸ್ಥಳೀಯಾಡಳಿತದ ನೆರವಿನಲ್ಲಿ ಹೆಲ್ಪ್ಲೈನ್ ಆರಂಭಿಸಬೇಕು ಎಂದು ಅವರು ಸೂಚಿಸಿದರು

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here