Friday 9th, May 2025
canara news

ಶಾಂತಿ ಕದಡುವರಿಗೆ ಖಡಕ್ ಎಚ್ಚರಿಕೆ ನೀಡಿದ ಎಸ್ಪಿ ಭೂಷಣ್

Published On : 31 May 2017   |  Reported By : Canaranews Network


ಮಂಗಳೂರು: ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಮುಸ್ಲಿಂ ಯುವಕರ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಸಂದೇಶ ರವಾನಿಸುತ್ತಿರುವರಿಗೆ ಜಿಲ್ಲಾ ಎಸ್ಪಿ ಭೂಷಣ್ ಜಿ ಬೊರಸೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮೇ 25 ರಂದು ಕಲ್ಲಡ್ಕದಲ್ಲಿ ನವಾಜ್ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಮೂವರು ಮುಸ್ಲಿಂ ಯುವಕರ ಮೇಲೆ ಹಿಂದೂ ಯುವಕ ತಂಡವೊಂದು ದಾಳಿ ಮಾಡಿ ಓರ್ವನಿಗೆ ಚೂರಿ ಇರಿದು ಪರಾರಿಯಾಗಿತ್ತು.

ಈ ಬಗ್ಗೆ ಈಗಾಗಲೇ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಸರಾಗವಾಗಿ ನಡೆಯುತ್ತಿದೆ. ಆದರೆ, ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಭಗ್ನ ಮಾಡುವಂತ ಸಂದೇಶಗಳನ್ನು ಪೋಸ್ಟ್ ಮಾಡುತ್ತಿರುವವರ ಮೇಲೆ ಎಸ್ಪಿ ಭೂಷಣ್ ಜಿ ಬೊರಸೆ ಗರಂ ಆಗಿದ್ದಾರೆ. ಮನೋವೃತ್ತಿಯ ಶಕ್ತಿಗಳು ಫೇಸ್ಬುಕ್, ವಾಟ್ಸಪ್ ಗಳಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರುವ ರೀತಿಯ ಸಂದೇಶಗಳನ್ನು ರವಾನಿಸುತ್ತಿರುವುದು ಗಮನಕ್ಕೆ ಬಂದಿದೆ. ಸಾರ್ವಜನಿಕರು ಈ ಬಗ್ಗೆ ಯಾವುದೇ ಗೊಂದಲಕ್ಕೆ ಒಳಗಾಗಬಾರದು. ಇಂತಹ ವ್ಯಕ್ತಿಗಳ ಬಗ್ಗೆ ನೇರವಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಅಥವಾ ಪೊಲೀಸ್ ಕಂಟ್ರೋಲ್ ರೂಮಿಗೆ ಮಾಹಿತಿ ನೀಡಿದಲ್ಲಿ ಕಠಿಣ ಕ್ರಮ ಜರುಗಿಸುವಲಾಗುವುದು" ಎಂದು ಎಸ್ಪಿ ತಿಳಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here