ಮಂಗಳೂರು: ವಿಶ್ವ ತಂಬಾಕು ರಹಿತ ದಿನ ಮೇ ೩೧ರಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದ್ದು, ಈ ಸಂದರ್ಭ ತಂಬಾಕು ನಿಯಂತ್ರಣ ಕಾಯ್ದೆ ೨೦೦೩ರ ಅಡಿ ಮಂಗಳೂರು ನಗರದ ಸಾರ್ವಜನಿಕರು ಅಥವಾ ವ್ಯಾಪಾರಿಗಳು ಕಾಯ್ದೆ ಉಲ್ಲಂಘಿಸಿದಲ್ಲಿ ಈಗಾಗಲೇ ರಚಿಸಲಾಗಿರುವ ವಿಶೇಷ ತಂಡದ ಮೂಲಕ ಅಂತಹವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಮತ್ತು ತಂಬಾಕು ನಿಯಂತ್ರಣ ಕಾರ್ಯಕ್ರಮಾಧಿಕಾರಿ ಡಾ. ರಾಜೇಶ್ ಬಿ.ವಿ ತಿಳಿಸಿದ್ದಾರೆ.