Tuesday 30th, April 2024
canara news

ಬಂಟ್ವಾಳ ತಾಲೂಕಿನಾದ್ಯಂತ ಜೂನ್ 9ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ

Published On : 03 Jun 2017   |  Reported By : Canaranews Network


ಮಂಗಳೂರು : ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಮುಸ್ಲಿಂ ಯುವಕರ ಮೇಲೆ ಹಿಂದೂ ಯುವಕರ ತಂಡ ಹಲ್ಲೆ ಮಾಡಿದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ತಾಲೂಕಿನಾದ್ಯಂತ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ. ಮೇ 27ರಿಂದ ಜೂನ್ 2ರ ವರೆಗೆ ಇದ್ದಂತಹ ನಿಷೇಧಾಜ್ಞೆಯನ್ನು ಜೂನ್ 9ರ ರಾತ್ರಿ 12 ಗಂಟೆಯವರೆಗೆ ವಿಸ್ತರಿಸುವಂತೆ ಉಪ ವಿಭಾಗ ದಂಡಾಧಿಕಾರಿ ಹಾಗೂ ಸಹಾಯಕ ಆಯುಕ್ತ ಎ.ಸಿ. ರೇಣುಕಾ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ಯಾವುದೇ ರೀತಿಯ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು. ನಿಷೇಧಾಜ್ಞೆ ಅವಧಿಯಲ್ಲಿ ಬಂಟ್ವಾಳ ತಾಲೂಕಿನಾದ್ಯಂತ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ, ಬೀದಿ, ಓಣೆ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here