Tuesday 30th, April 2024
canara news

ಉಳ್ಳಾಲದಲ್ಲಿ ಹೆಚ್ಚಿದ ಕಡಲ್ಕೊರೆತ; ಆತಂಕದಲ್ಲಿ ನಿವಾಸಿಗಳು

Published On : 03 Jun 2017   |  Reported By : Canaranews Network


ಮಂಗಳೂರು: ಮುಂಗಾರು ಸಮೀಪಿಸುತ್ತಿದ್ದಂತೆ ಮಂಗಳೂರು ಹಾಗೂ ಉಡುಪಿಯ ಸಮುದ್ರ ತೀರ ಪ್ರದೇಶಗಳಲ್ಲಿ ಉಬ್ಬರ ಹೆಚ್ಚಾಗಿದೆ. ಉಳ್ಳಾಲದ ಕಿಲೇರಿಯ ನಗರ, ಸೋಮೇಶ್ವರ, ಉಚ್ಚಿಲ ಭಾಗದಲ್ಲಿ ಮನೆ ಹಾಗೂ ಮಸೀದಿಗಳಿಗೆ ಬುಧವಾರ ಮಧ್ಯಾಹ್ನದಿಂದ ಅಲೆಗಳು ಅಪ್ಪಳಿಸಲು ಆರಂಭವಾಗಿದ್ದು, ಜನ ಭೀತಿ ಎದುರಿಸುತ್ತಿದ್ದಾರೆ.

ಕಿಲೇರಿಯ ನಗರದಲ್ಲಿರುವ 10ಕ್ಕೂ ಅಧಿಕ ಮನೆಗಳು, ಮಸೀದಿಗಳಿಗೆ ಅಲೆಗಳು ಅಪ್ಪಳಿಸಲು ಆರಂಭವಾಗಿದೆ. ಮಳೆ ಆರಂಭವಾಗುತ್ತಿದಂತೆ ಸಮುದ್ರದ ಅಲೆಗಳ ರಭಸ ಮತ್ತಷ್ಟು ಹೆಚ್ಚಾಗುವುದರಿಂದ ಸ್ಥಳೀಯರ ಆತಂಕಕ್ಕೀಡಾಗಿದ್ದಾರೆ.ಕೋಟೆಪುರ, ಮೊಗವೀರ ಪಟ್ನ ಭಾಗದಲ್ಲಿ ಶಾಶ್ವತ ಬ್ರೇಕ್ ವಾಟರ್ ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ಸಮುದ್ರದ ಅಲೆಗಳು ಕಿಲೇರಿಯನಗರ, ಸುಭಾಷ್ ನಗರ, ಉಚ್ಚಿಲ, ಸೋಮೇಶ್ವರ ಭಾಗದಲ್ಲಿ ಅಪ್ಪಳಿಸಲು ಆರಂಭವಾಗಿದೆ. ಏಕಕಾಲದಲ್ಲಿ ಉಳ್ಳಾಲದಿಂದ ತಲಪಾಡಿ ಭಾಗದವರೆಗೂ ಸುರಕ್ಷಾ ಕ್ರಮ ಕೈಗೊಂಡು ಕಾಮಗಾರಿ ಆರಂಭಿಸಿದ್ದರೆ ಇಂತಹ ತೊಂದರೆ ಮರುಕಳಿಸುತ್ತಿರಲಿಲ್ಲ ಅನ್ನುವುದು ಸ್ಥಳೀಯರ ಆರೋಪ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here