Friday 9th, May 2025
canara news

ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ

Published On : 03 Jun 2017   |  Reported By : Canaranews Network


ಮಂಗಳೂರು: ಮಂಗಳೂರಿನ ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಗುರುವಾರ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಳಚ್ಚಿಲ್ ನ ಶ್ರೀನಿವಾಸ್ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಬಿಇ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಚಿಕ್ಕಮಗಳೂರು ಮೂಲದ ಚಂದ್ರೇಗೌಡ ಎನ್ನುವರ ಪುತ್ರಿ ಸುಚೇತನ ಎ ಸಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಗುರುವಾರ ಪ್ರಥಮ ಬಿಇ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಇದರಲ್ಲಿ ಸುಚೇತನ ಫೇಲ್ ಆಗಿದ್ದಾಳೆ ಎನ್ನಲಾಗಿದೆ. ಇದರಿಂದ ಮನನೊಂದು ಹಾಸ್ಟೆಲ್ ನ ತಮ್ಮ ಕೊಠಡಿಯಲ್ಲಿ ಗುರುವಾರ ಮಧ್ಯಾಹ್ನ ಶಾಲ್ ಸಹಾಯದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಡಿದ್ದಾಳೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಲಾಗಿದೆ.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here