Saturday 4th, May 2024
canara news

ಪ್ಲಾಸ್ಟಿಕ್ ಅಕ್ಕಿ ಭಯ ಬೇಡ: ಸಚಿವ ಖಾದರ್

Published On : 14 Jun 2017   |  Reported By : Canaranews Network


ಮಂಗಳೂರು: ಪ್ಲಾಸ್ಟಿಕ್ ಅಕ್ಕಿ ಮತ್ತು ಪ್ಲಾಸ್ಟಿಕ್ ಮೊಟ್ಟೆ ಬಗ್ಗೆ ಹರಡುತ್ತಿರುವ ಸುದ್ದಿಗಳು ಆಧಾರ ರಹಿತವಾಗಿವೆ. ಈ ಕುರಿತಂತೆ ಜನಸಾಮಾನ್ಯರು ಯಾವುದೇ ಭಯಪಡಬೇಕಾಗಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಹೇಳಿದರು.ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರದ ಅನ್ನಭಾಗ್ಯ ಯೋಜನೆಯ ಯಶಸ್ಸನ್ನು ಸಹಿಸದೆ ಕೆಲವರು ಇಂತಹ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ಪ್ಲಾಸ್ಟಿಕ್ ಅಕ್ಕಿ ತಯಾರಿಸಲು 80ರಿಂದ 100 ರೂ.ಗಳಷ್ಟು ಮತ್ತು ಪ್ಲಾಸ್ಟಿಕ್ ಮೊಟ್ಟೆಗೆ 40 ರೂ. ಮೇಲ್ಪಟ್ಟು ಖರ್ಚಾಗುತ್ತದೆ. ಹಾಗಾಗಿ ಅಂತಹ ದುಸ್ಸಾಹಸಕ್ಕೆ ಯಾರೂ ಕೈ ಹಾಕಲಾರರು. ಜನರು ಗೊಂದಲಗೊಳ್ಳಬಾರದು ಎಂಬುದಾಗಿ ಅವರು ವಿನಂತಿಸಿದರು.ಅನ್ನಭಾಗ್ಯ ಯೋಜನೆಯಡಿ ಪ್ರತಿ ತಿಂಗಳು 2.77 ಲಕ್ಷ ಮೆಟ್ರಿಕ್ ಟನ್ ಅಕ್ಕಿ ರಾಜ್ಯಕ್ಕೆ ಬೇಕಾಗುತ್ತದೆ. ಇದನ್ನು ಫುಡ್ ಕಾರ್ಪೊರೇಶನ್ ಆಫ್ ಇಂಡಿಯಾದ ಮುಖಾಂತರವೇ ತರಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

 




More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here