Friday 19th, April 2024
canara news

ಕಲ್ಲಡ್ಕದಲ್ಲಿ ಅಹಿತಕರ ಘಟನೆ; ಗಾಳಿ ಸುದ್ದಿಗೆ ಕಿವಿಗೊಡಬೇಡಿ; ಎಸ್ಪಿ

Published On : 15 Jun 2017   |  Reported By : Canaranews Network

ಮಂಗಳೂರು: ಪ್ರಕ್ಷುಬ್ಧಗೊಂಡಿದ್ದ ಕಲ್ಲಡ್ಕದಲ್ಲಿ ಶಾಂತಿ ನೆಲೆಸಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಕಲ್ಲಡ್ಕ ಪರಿಸರ ಸಹಿತ ತಾಲೂಕಿನ ಆಯಕಟ್ಟಿನ ಪ್ರದೇಶದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಪರಿಸ್ಥಿತಿ ಪೊಲೀಸರ ನಿಯಂತ್ರಣದಲ್ಲಿ ಇದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ ತಿಳಿಸಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಲ್ಲಡ್ಕದಲ್ಲಿ ನಡೆದ ಘರ್ಷಣೆಯ ಬಳಿಕ ಹಲವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ. ವಿಚಾರಣೆಯ ಬಳಿಕ ಅಮಾಯಕರನ್ನು ಬಿಟ್ಟು ಬಿಡಲಾಗುವುದು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಯಾವುದೇ ಗಾಳಿಸುದ್ದಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.

More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here