Saturday 10th, May 2025
canara news

ಅಣ್ಣಾಮಲೈ ದ.ಕ.ಎಸ್ಪಿ ಆಗುವರೇ ?

Published On : 21 Jun 2017   |  Reported By : Canaranews Network


ಮಂಗಳೂರು: "ದಕ್ಷಿಣ ಕನ್ನಡ ಜಿಲ್ಲೆ ಎಸ್ಪಿ ಆಗುವಂತೆ ನನಗೆ ಇದುವರೆಗೆ ಯಾರಿಂದಲೂ ಸೂಚನೆ ಬಂದಿಲ್ಲ' ಎಂದು ಖಡಕ್ ಐಪಿಎಸ್ ಅಧಿಕಾರಿ ಎಂದೇ ಕರೆಸಿಕೊಂಡಿರುವ ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ.ಏಕೆಂದರೆ, ದಕ್ಷಿಣ ಕನ್ನಡ ಜಿಲ್ಲೆಯ ಸದ್ಯದ ಕಾನೂನು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರವು ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಅವರನ್ನು ಶೀಘ್ರದಲ್ಲೇ ಜಿಲ್ಲೆಗೆ ವರ್ಗಾಯಿಸುತ್ತಾರೆ ಎನ್ನುವ ಸುದ್ದಿಯೊಂದು ಕಳೆದ ಕೆಲವು ದಿನಗಳಿಂದ ಜಿಲ್ಲೆಯಾದ್ಯಂತ ಹರಿದಾಡುತ್ತಿದೆ.

ಅಷ್ಟೇಅಲ್ಲ; ಅಣ್ಣಾಮಲೈ ಅವರು ದಕ್ಷಿಣ ಕನ್ನಡ ಜಿಲ್ಲೆ ಎಸ್ಪಿ ಆಗಿ ನೇಮಕಗೊಳಿಸುವುದಕ್ಕೆ ಬೆಂಬಲ ವ್ಯಕ್ತಪಡಿಸಿ ಈಗ ಸಾಮಾಜಿಕ ಜಾಲತಾಣಗಳಲ್ಲಿಯೂ ಸಾಕಷ್ಟು ಸಂದೇಶ, ಬರಹಗಳು ಹರಿದಾಡುತ್ತಿವೆ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ ಅವರೊಂದಿಗೆ ನಡೆಸಿದ ವಿವಾದಾತ್ಮಕ ಮಾತುಕತೆ ವೀಡಿಯೋ ಬಹಿರಂಗಗೊಂಡ ಬಳಿಕ ಅಣ್ಣಾಮಲೈ ಅವರು ಜಿಲ್ಲೆಗೆ ಆಗಮಿಸಲಿದ್ದಾರೆ ಎಂಬ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ಬಂದಿವೆ. ಅಣ್ಣಾಮಲೈ ಅವರಂಥ ದಕ್ಷ ಹಾಗೂ ದಿಟ್ಟತನದ ಪೊಲೀಸ್ ಅಧಿಕಾರಿಯೇ ಸೂಕ್ತ ವ್ಯಕ್ತಿ ಎಂಬ ಅಭಿಪ್ರಾಯದ ಮಾತುಗಳು ಕೂಡ ಈಗ ಜಿಲ್ಲೆಯಲ್ಲಿ ವ್ಯಕ್ತವಾಗುತ್ತಿವೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here