Saturday 10th, May 2025
canara news

ಕಲ್ಲಡ್ಕ ಗಲಭೆ ಪ್ರಕರಣ: ಎಸ್ಪಿ ಅಣ್ಣಾಮಲೈ ಜಿಲ್ಲೆಗೆ ಭೇಟಿ

Published On : 22 Jun 2017   |  Reported By : Canaranews Network


ಮಂಗಳೂರು: ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆದ ಘಟನೆ ಬಳಿಕ ದಕ್ಷಿಣ ಕನ್ನಡದಲ್ಲಿ ತಲೆದೋರಿರುವ ಉದ್ವಿಗ್ನ ಪರಿಸ್ಥಿತಿ ಹತೋಟಿಗೆ ತರಲು ಚಿಕ್ಕಮಗಳೂರಿನ ಖಡಕ್ ಎಸ್ಪಿ ಅಣ್ಣಾಮಲೈರನ್ನು ಕರೆಸಿಕೊಳ್ಳಲಾಗಿದೆ. ಹಾಲಿ ಎಸ್ಪಿ ಭೂಷಣ್ ಗುಲಾಬ್ ರಾವ್ ಬೋರಸೆ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು, ಇವರ ಸ್ಥಾನಕ್ಕೆ ಮಂಡ್ಯ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಿಸಲಾಗಿದೆ. ಸುಧೀರ್ ಕುಮಾರ್ ರೆಡ್ಡಿಗೆ ಅಣ್ಣಾಮಲೈ ಸಾಥ್ ನೀಡಲಿದ್ದು, ಬುಧವಾರವೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಸದ್ಯ ಬೆಂಜನಪದವಿನಲ್ಲಿ ನಡೆದ ಕೊಲೆ ಘಟನೆ ಬಳಿಕ ಉದ್ವಿಗ್ನ ಪರಿಸ್ಥಿತಿ ನಿಭಾಯಿಸಲು ಎಸ್ಪಿ ಭೂಷಣ್ ಗುಲಾಬ್ರಾವ್ ಬೋರಸೆಗೆ ಅಣ್ಣಾಮಲೈ ನೆರವು ನೀಡುತ್ತಿದ್ದಾರೆ. ಮೃತ ಅಶ್ರಫ್ನ ಶವವನ್ನು ಮರಣೋತ್ತರ ಪರೀಕ್ಷೆಗೆ ನಗರದ ಖಾಸಗಿ ಆಸ್ಪತ್ರೆಗೆ ಕರೆತಂದಾಗ ಅಣ್ಣಾಮಲೈ ಅವರೇ ಬಂದೋಬಸ್ತ್ ಕೈಗೊಂಡಿದ್ದರು. ನಂತರ ಸೂಕ್ಷ್ಮಪ್ರದೇಶವಾದ ಫರಂಗಿಪೇಟೆಯಲ್ಲಿ ಪೊಲೀಸ್ ತಂಡದೊಂದಿಗೆ ಅಣ್ಣಾಮಲೈ ಮೊಕ್ಕಾಂ ಹೂಡಿದ್ದರು. ಕಲ್ಲಡ್ಕ ಘಟನೆಯನ್ನು ನಿಭಾಯಿಸುವಲ್ಲಿ ಎಸ್ಪಿ ಭೂಷಣ್ ವಿಫಲವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಆಕ್ಷೇಪ ವ್ಯಕ್ತಪಡಿಸಿದ್ದರು.

ಅಲ್ಲದೆ, ಆರೆಸ್ಸೆಸ್ ಮುಖಂಡ ಡಾ.ಪ್ರಭಾಕರ ಭಟ್ ಮೇಲೆ ಕೇಸು ದಾಖಲಿಸಿ ಬಂಧಿಸುವಂತೆ ರೈ ಎಸ್ಪಿಗೆ ತಾಕೀತು ಮಾಡಿದ್ದರು. ಈ ವಿಚಾರ ಸಾಕಷ್ಟು ವಿವಾದಕ್ಕೆ ಎಡೆಮಾಡಿತ್ತಲ್ಲದೆ, ವಿಧಾನಸಭಾ ಅಧಿವೇಶನದಲ್ಲೂ ಚರ್ಚೆಗೆ ಕಾರಣವಾಗಿತ್ತು. ಕಲ್ಲಡ್ಕದಲ್ಲಿ 2 ನೇ ಸಲ ಹಲ್ಲೆ ಘಟನೆ ಸಂಭವಿಸಿದಾಗ, ಬೋರಸೆಯವರನ್ನು ರಜೆ ಮೇಲೆ ಕಳುಹಿಸಿ ಚಿಕ್ಕಮಗಳೂರಿನಿಂದ ಅಣ್ಣಾಮಲೈ ಕರೆಸಿಕೊಳ್ಳಲು ಉಸ್ತುವಾರಿ ಸಚಿವರು ಪೊಲೀಸ್ ಉನ್ನತಾಧಿಕಾರಿಗಳಿಗೆ ಸೂಚಿಸಿದ್ದರು. ಅಣ್ಣಾಮಲೈ ಸೋಮವಾರವೇ ಜಿಲ್ಲೆಗೆ ಆಗಮಿಸಬೇಕಿತ್ತು. ಆದರೆ ಚಿಕ್ಕಮಗಳೂರಿನ ಆಲ್ದೂರಿನಲ್ಲಿ ಪ್ರಕರಣವೊಂದು ಸಂಭವಿಸಿದ ಕಾರಣ ಎರಡು ದಿನ ವಿಳಂಬವಾಗಿ ಎಸ್ಪಿ ಅಣ್ಣಾಮಲೈ ಬುಧವಾರ ಜಿಲ್ಲೆಗೆ ಆಗಮಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here