Saturday 2nd, August 2025
canara news

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ರೆಡ್ಡಿ ಅಧಿಕಾರ ಸ್ವೀಕಾರ

Published On : 23 Jun 2017   |  Reported By : Canaranews Network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರಿಸಿದ್ದಾರೆ. ಭೂಷಣ್ ಗುಲಾಬ್ ರಾವ್ ಬೋರಸೆಯವರಿಂದ ಅಧಿಕಾರ ಸ್ವೀಕರಿಸಿದ ಸುಧೀರ್ ಕುಮಾರ್ ರೆಡ್ಡಿ ತಕ್ಷಣ ಬಂಟ್ವಾಳಕ್ಕೆ ತೆರಳಿ ಗಲಭೆ ಪರಿಸ್ಥಿತಿ ಅವಲೋಕಿಸಿದರು.

ಮಂಡ್ಯದಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುಧೀರ್ ಕುಮಾರ್ ರೆಡ್ಡಿ 2010ನೆ ಸಾಲಿನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಮೂಲತ: ಆಂಧ್ರ ಪ್ರದೇಶದ ಗುಂಟೂರಿನವರಾದ ರೆಡ್ಡಿ ಈ ಹಿಂದೆ ಭಟ್ಕಳದಲ್ಲಿ ಎಎಸ್ಪಿಯಾಗಿ, ಚಿಕ್ಕಬಳ್ಳಾಪುರ, ಬೀದರ್ ಜಿಲ್ಲೆಗಳಲ್ಲಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ, ಪ್ರಸ್ತುತ ಬೆಂಗಳೂರಿನ ನಗರ ಪೊಲೀಸ್ ಆಡಳಿತ ವಿಭಾಗಕ್ಕೆ ವರ್ಗಾವಣೆಗೊಂಡಿರುವ ಭೂಷಣ್ ಗುಲಾಬ್ ರಾವ್ ಬೋರಸೆ ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು. ಕಲ್ಲಡ್ಕ ಘಟನೆಯನ್ನು ನಿಭಾಯಿಸುವಲ್ಲಿ ಎಸ್ಪಿ ಭೂಷಣ್ ವಿಫಲವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಆಕ್ಷೇಪ ವ್ಯಕ್ತಪಡಿಸಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here