Thursday 25th, April 2024
canara news

ಅಶ್ರಫ್ ಕೊಲೆ ಪ್ರಕರಣದ ತನಿಖೆ ಚುರುಕು

Published On : 23 Jun 2017   |  Reported By : Canaranews Network


ಮಂಗಳೂರು: ಅಶ್ರಫ್ ಕೊಲೆ ಪ್ರಕರಣದ ದುಷ್ಕರ್ಮಿಗಳ ಶೋಧಕ್ಕೆ 4 ತಂಡಗಳನ್ನು ರಚಿಸಲಾಗಿದೆ. ಕೊಲೆ ಕೃತ್ಯದಲ್ಲಿ ಭಾಗಿಯಾದವರನ್ನು ಪತ್ತೆ ಹಚ್ಚಿ ಶೀಘ್ರವಾಗಿ ಬಂಧಿಸಲಾಗುವುದು ಎಂದು ಎಡಿಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.

ಮುಹಮ್ಮದ್ ಅಶ್ರಫ್ ಕಲಾಯಿ ಅವರ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು . ಬಂಟ್ವಾಳ ತಾಲೂಕಿನಲ್ಲಿ ನಿರಂತರವಾಗಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ಇದರ ಬಗ್ಗೆ ನಿಗಾ ವಹಿಸುವುದಾಗಿ ಅವರು ಈ ಸಂದರ್ಭ ಹೇಳಿದರು.ಕಲ್ಲಡ್ಕ, ಮಣಿ, ಬಿ ಸಿ ರೋಡ್, ಕೈಕಂಬ, ಪರಂಗಿಪೇಟೆ ಮತ್ತು ಬಂಟ್ವಾಳ ಪರಿಸರದಲ್ಲಿ ಪರಿಸ್ಥಿತಿ ಹತೋಟಿಗೆ ತರುವ ನಿಟ್ಟಿನಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಜೂ. 27ರ ವರೆಗೆ ಜಿಲ್ಲೆಯಲ್ಲಿ ಹಾಗೂ ಮಂಗಳೂರು ನಗರದಲ್ಲಿ 144 ಸೆಕ್ಷನ್ ಜಾರಿಯಲ್ಲಿರುವುದಾಗಿ ಅವರು ಈ ಸಂದರ್ಭ ಮಾಹಿತಿ ನೀಡಿದರು. ಇನ್ನು ದೇವಸ್ಥಾನ-ಮಂದಿರಗಳ ಮೇಲೆ ದಾಳಿ, ಮತೀಯ ಉಗ್ರವಾದ, ಲವ್ ಜಿಹಾದ್, ಅಕ್ರಮ ಗೋಸಾಗಾಣಿಕೆ ವಿರೋಧಿಸಿ ಹಿಂದೂ ಹಿತರಕ್ಷಣಾ ಸಮಿತಿಯ ವತಿಯಿಂದ ಜೂ.24ರಂದು ಬೆಳಗ್ಗೆ 10ಕ್ಕೆ ಬಿ.ಸಿ.ರೋಡಿನಲ್ಲಿ ಇರುವ ಪ್ರತಿಭಟನೆಗೆ ಪೊಲೀಸ್ ಇಲಾಖೆಯಿಂದ ಯಾವುದೇ ಅನುಮತಿ ಇಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here