Saturday 10th, May 2025
canara news

ಅಶ್ರಫ್ ಕಳಾಯಿ ಕೊಲೆ ಪ್ರಕರಣ: ಓರ್ವ ಪ್ರಮುಖ ಆರೋಪಿ ಪೊಲೀಸ್ ವಶ

Published On : 28 Jun 2017   |  Reported By : Canaranews Network


ಮಂಗಳೂರು: ಮಹಮದ್ ಅಶ್ರಫ್ ಕಳಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದು, ಪ್ರಮುಖ ಇಬ್ಬರು ಆರೋಪಿಗಳಲ್ಲಿ ಒಬ್ಬನಾಗಿರುವ ದಿವ್ಯರಾಜ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

5 ಮಂದಿ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಪ್ರಮುಖ ಆರೋಪಿಗಳಾದ ದಿವ್ಯರಾಜ್ ಶೆಟ್ಟಿ ಮತ್ತು ಭರತ್ ಕುಮ್ದೇಲು ಅವರು ಬಂಧನಕ್ಕೆ ಬಾಕಿ ಇದ್ದಾರೆ ಎಂದು ಶನಿವಾರ ಐಜಿಪಿ ಪಿ.ಹರಿಶೇಖರನ್ ತಿಳಿಸಿದ್ದರು.ಬಂಧಿತ ಆರೋಪಿಗಳಾದ ಪವನ್ ಕುಮಾರ್ ಯಾನೆ ಪುಂಡ, ರಂಜಿತ್, ಸಂತೋಷ್ ಯಾನೆ ಸಂತು, ಶಿವ ಪ್ರಸಾದ್ ಯಾನೆ ಶಿವು ಮತ್ತು ಅಭಿನ್ ರೈ ಯಾನೆ ಅಭಿ (23) ಅವರನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿ ಬಳಿಕ ಹೆಚ್ಚಿನ ವಿಚಾರಣೆಗಾಗಿ ಬಂಟ್ವಾಳ ಪೊಲೀಸರ ಕಸ್ಟಡಿಗೆ ಒಪ್ಪಿಸಲಾಗಿದೆ. ಪೊಲೀಸರು ಈ ಆರೋಪಿಗಳನ್ನು ರಹಸ್ಯ ತಾಣದಲ್ಲಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here