Saturday 10th, May 2025
canara news

ಕೊಲೆಗಡುಕರ ಜೊತೆ ಪಿತೂರಿದಾರರನ್ನೂ ಬಂಧಿಸಿ: ರೈ

Published On : 28 Jun 2017   |  Reported By : Canaranews Network


ಮಂಗಳೂರು: ದ.ಕ.ಜಿಲ್ಲೆಯಲ್ಲಿ ಶಾಂತಿ ಕದಡುತ್ತಿರುವ ಕೊಲೆಗಡುಕರ ಜೊತೆ ಕೃತ್ಯ ಎಸಗಲು ಪ್ರಚೋದನೆ ನೀಡಿದವರನ್ನೂ ಬಂಧಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಆಗ್ರಹಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಜಿಲ್ಲೆಯ ಶಾಂತಿ, ಸುವ್ಯವಸ್ಥೆಯ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಜಿಲ್ಲಾ ಎಸ್ಪಿ ಜೊತೆ ಮಾತನಾಡಿದ್ದರಲ್ಲಿ ತಪ್ಪಿಲ್ಲ.

ಅದನ್ನು ನಾನು ಈಗಲೂ ಸಮರ್ಥಿಸುತ್ತಿದ್ದೇನೆ ಎಂದು ವಿಡಿಯೋ ಬಗ್ಗೆ ಸಮರ್ಥನೆ" ಮಾಡಿಕೊಂಡರು.ನಾನು ಬಂಟ್ವಾಳ ಐಬಿಯಲ್ಲಿ ಎಸ್ಪಿ ಜೊತೆ ಮಾತನಾಡಿದ ಒಂದು ಭಾಗವನ್ನು ಮಾತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಡಲಾಗಿದೆ. ಅದನ್ನೇ ಮುಂದಿಟ್ಟುಕೊಂಡು ಕೆಲವರು ವಿರೋಧ ವ್ಯಕ್ತಪಡಿಸತೊಡಗಿದರು. ಆದರೆ, ವಾಸ್ತವ ವಿಚಾರವನ್ನು ಮರೆಮಾಚಲಾಗಿದೆ ಎಂದು ರೈ ಹೇಳಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here