ಕುಂದಾಪುರ: ಇಲ್ಲಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೈಂಟ್ ಮೇರಿಸ್ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಉದ್ಘಾಟನಾ ಸಮಾರಂಭ ಜೂ.30ರಂದು ಪೂರ್ವಾಹ್ನ 10.30ಕ್ಕೆ ಶಾಲಾ ಸಭಾಭವನ ನಡೆಯಲಿದೆ.ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಅ.ವಂ.ಫಾ.ಲೋರೆನ್ಸ್ ಡಿ ಸೋಜಾ ವಹಿಸಲಿದ್ದಾರೆ.
ಸುವರ್ಣ ಮಹೋತ್ಸವದ ಉದ್ಘಾಟನೆಯನ್ನು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾಡಲಿದ್ದು,ಶುಭಾ ಶಂಸನೆಯನ್ನು ಕುಂದಾಪುರ ಸೈಂಟ್ ಮೇರಿಸ್ ಸಮೂಹ ವಿದ್ಯಾ ಸಂಸ್ಥೆಗಳ ಸಂಚಾಲಕ ಅ.ವಂ.ಫಾ.ಅನಿಲ್ ಡಿ ಸೋಜಾ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕುಂದಾಪುರ ಪುರಸಭೆಯ ಅಧ್ಯಕ್ಷೆ ವಸಂತಿ ಸಾರಂಗ, ಉಪಾಧ್ಯಕ್ಷ ರಾಜೇಶ್ ಕಾವೇರಿ,ಕುಂದಾಪುರದ ಸಹಾಯಕ ಆಯುಕ್ತೆ ಶಿಲ್ಪನಾಗ್, ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸೀತಾರಾಮ ಶೆಟ್ಟಿ, ಜೆ.ಸಿ.ಐ. ಕುಂದಾಪುರ ಚರಿಷ್ಮಾದ ಘಟಕಾಧ್ಯಕ್ಷೆ ಗೀತಾಂಜಲಿ ಆರ್.ನಾಯಕ್ ಆಗಮಿಸಲಿದ್ದಾರೆ.
ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕಗಳ ವಿತರಣೆ, ಪ್ರತಿಭಾ ಪುರಸ್ಕಾರ,ಉಚಿತ ಸೈಕಲ್ ವಿತರಣೆ,ಶುದ್ಧ ಕುಡಿಯುವ ನೀರಿನ ಘಟಕದ ಹಸ್ತಾಂತರ ಹಾಗೂ ಸಸಿ ವಿತರಣೆ ನಡೆಯಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಲೂವಿಸ್ ಜೆ.ಫೆರ್ನಾಂಡಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.