Friday 26th, April 2024
canara news

ಬಂಟ್ವಾಳ ಎಸ್ಡಿಪಿಐ ಮುಖಂಡನ ಹತ್ಯೆ : ಪ್ರಮುಖ ಆರೋಪಿ ಭರತ್ ಸೆರೆ

Published On : 01 Jul 2017   |  Reported By : Canaranews Network


ಮಂಗಳೂರು: ಎಸ್ಡಿಪಿಐ ಅಮ್ಮುಂಜೆ ವಲಯ ಅಧ್ಯಕ್ಷ ಮಹಮ್ಮದ್ ಅಶ್ರಫ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಭರತ್ ಕುಮ್ಡೇಲ್ನನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ಆರೋಪಿಗಳನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದರು.

ಇದೀಗ ಬಂಧನಕ್ಕೊಳಗಾಗಿರುವ ಆರೋಪಿ ಭರತ್ ಭಜರಂಗದಳದ ಪುತ್ತೂರು ವಲಯದ ಸಂಚಾಲಕನಾಗಿದ್ದ. ನಿಷೇಧಾಜ್ಞೆ ಇದ್ದ ವೇಳೆಯಲ್ಲೆ ಹತ್ಯೆ ನಡೆದು ವಾತಾವರಣ ಇನ್ನಷ್ಟು ಉದ್ವಿಗ್ನ ಗೊಂಡಿತ್ತು. ಜುಲೈ 2 ರ ವರಗೆ ಬಂಟ್ವಾಳ ಸೇರಿದಂತೆ ಜಿಲ್ಲೆಯ 4 ತಾಲೂಕುಗಳಲ್ಲಿ ನಿಷೇಧಾಜ್ಞೆ ಮುಂದುವರೆದಿದೆ. ಕಲಾಯಿ ನಿವಾಸಿಯಾಗಿದ್ದ ವೃತ್ತಿಯಲ್ಲಿ ರಿಕ್ಷಾ ಚಾಲಕರಾಗಿದ್ದ ಅಶ್ರಫ್ರರನ್ನು ದುಷ್ಕರ್ಮಿಗಳು ಬೆಂಜನಪದವು ಕರಾವಳಿ ಸೈಟ್ ರಾಮನಗರ ಸಮೀಪ ಜೂನ್ 21 ರಂದು ಹಾಡಹಗಲೆ ತಲವಾರಿನಿಂದ ಕಡಿದು ಹತ್ಯೆಗೈದಿದ್ದರು.ಈ ಘಟನೆಯಿಂದ ದ.ಕ.ಜಿಲ್ಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

 

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here