Saturday 10th, May 2025
canara news

ಚುನಾವಣೆಗಳಲ್ಲಿ ಎಲ್ಲ ಸ್ಥಾನ ಗೆಲ್ಲುವ ಗುರಿ: ಹರೀಶ್ ಕುಮಾರ್

Published On : 04 Jul 2017   |  Reported By : canaranews network


ಮಂಗಳೂರು: ರಾಜ್ಯ ವಿಧಾನಸಭೆ, ವಿಧಾನಪರಿಷತ್ ಸೇರಿದಂತೆ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ಸ್ಥಾನಗಳಲ್ಲಿ ಜಯಭೇರಿ ಬಾರಿಸುವುದು ನನ್ನ ಗುರಿಯಾಗಿದ್ದು ಈ ನಿಟ್ಟಿನಲ್ಲಿ ಪಕ್ಷವನ್ನು ಸಂಘಟಿಸಿ ಸಿದ್ಧಗೊಳಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು.

ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಜರಗಿದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. ಇನ್ನು ಒಂದು ವರ್ಷದೊಳಗೆ ವಿಧಾನಸಭಾ ಚುನಾವಣೆ ಬರಲಿದೆ. ಕೆಲವೇ ತಿಂಗಳುಗಳಲ್ಲಿ ವಿಧಾನಪರಿಷತ್ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.ಇನ್ನೆರಡು ವರ್ಷಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಜಿಲ್ಲೆಯ ಎಲ್ಲ 8 ವಿಧಾನಸಭಾ ಕ್ಷೇತ್ರಗಳನ್ನು, ಸಂಸತ್ಸದಸ್ಯ ಸ್ಥಾನವನ್ನು, ವಿಧಾನ ಪರಿಷತ್ ಸ್ಥಾನಗಳನ್ನು ಪಕ್ಷ ಪಡೆದುಕೊಳ್ಳುವತ್ತ ನಾವು ಸಾಗಬೇಕಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸೇರಿದಂತೆ ಎಲ್ಲರೂ ಶ್ರಮಿಸಬೇಕು. ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಕಾರ್ಯ ತೀವ್ರಗೊಳ್ಳಬೇಕು ಎಂದರು.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here