Saturday 2nd, August 2025
canara news

ಗಾಂಜಾ ಸಾಗಾಟ, ಮೂವರು ಮಂಗಳೂರು ಸಿಸಿಬಿ ಬಲೆಗೆ

Published On : 04 Jul 2017   |  Reported By : Canaranews Network


ಮಂಗಳೂರು: ಮಂಗಳೂರಿನಲ್ಲಿ ಬೃಹತ್ ಪ್ರಮಾಣದ ಗಾಂಜಾ ಸಾಗಾಟ, ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರಿನ ನರಿಂಗಾನದ ನಿವಾಸಿ ರಮೀಝ್ ರಾಜ್ (24), ನಾಟೆಕಲ್ ನ ಮುಹಮ್ಮದ್ ಹನೀಫ್ (31) ಮತ್ತು ಬೆಳ್ಮದ ಇಕ್ಬಾಲ್ ಹಾರಿಸ್ (24) ಎಂದು ಗುರುತಿಸಲಾಗಿದೆ.

ಜುಲೈ 3ರಂದು ಅಂಧ್ರಪ್ರದೇಶದ ಚಿತ್ತೂರಿನಿಂದ ಮಂಗಳೂರು ನಗರಕ್ಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಗಾಂಜಾವನ್ನು ತಂದು ಮಂಗಳೂರಿನ ಫಳ್ನೀರ್ ರಸ್ತೆಯ ಲಾಡ್ಜ್ ವೊಂದರಲ್ಲಿ ಕೊಠಡಿಯನ್ನು ಪಡೆದು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು.ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರ್ ನಲ್ಲಿನ ವಸತಿಗೃಹದಲ್ಲಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದರು.

ಬಂಧಿತರಿಂದ ಒಟ್ಟು 10 ಕೆಜಿ ಗಾಂಜಾ, 3 ಮೊಬೈಲ್ ಫೋನ್, ಡಿಜಿಟಲ್ ತೂಕದ ಯಂತ್ರ, ಗಾಂಜಾವನ್ನು ಸಣ್ಣ ಸಣ್ಣ ಪ್ಯಾಕೆಟ್ ಗಳಾಗಿ ಮಾರಾಟ ಮಾಡಲು ಉಪಯೋಗಿಸುವ ಪ್ಲಾಸ್ಟಿಕ್ ಕವರ್ ಗಳು, 9,500 ರು. ನಗದು ಹಾಗೂ ಒಂದು ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here