Wednesday 24th, April 2024
canara news

ಕರಾವಳಿಯಲ್ಲಿ ನಿಲ್ಲದ ಹಿಂಸಾಚಾರ, ಆರೆಸ್ಸೆಸ್ ಕಾರ್ಯಕರ್ತನಿಗೆ ಚೂರಿ ಇರಿತ

Published On : 06 Jul 2017   |  Reported By : Canaranews Network


ಮಂಗಳೂರು: ಆರೆಸ್ಸೆಸ್ ಕಾರ್ಯಕರ್ತನೋರ್ವನ ಮೇಲೆ ತಂಡವೊಂದು ದಾಳಿ ನಡೆಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ದ.ಕ.ಜಿಲ್ಲೆಯ ಬಿ.ಸಿ.ರೋಡಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಸಜಿಪಮುನ್ನೂರು ಗ್ರಾಮದ ಕಂದೂರು ನಿವಾಸಿ ತನಿಯಪ್ಪ ಎಂಬವರ ಮಗ ಶರತ್(28) ಗಾಯಗೊಂಡ ಯುವಕ. ಬಿ.ಸಿ.ರೋಡಿನಲ್ಲಿ ಉದಯಲಾಂಡ್ರಿಯನ್ನು ನಡೆಸುತ್ತಿರುವ ಇವರು ಮಂಗಳವಾರ ರಾತ್ರಿ ಕೆಲಸ ಮುಗಿಸಿ, ಅಂಗಡಿಯಿಂದ ಹೊರಬರುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಚೂರಿ ಇರಿತಕ್ಕೆ ಒಳಗಾದ ಶರತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ತಾಲೂಕಿನಾದ್ಯಂತ 144ಸೆಕ್ಷನ್ ಜಾರಿಯಲ್ಲಿದ್ದರೂ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಘಟನೆ ನಡೆದ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಸ್ಥಳಕ್ಕೆ ದೌಡಾಯಿಸಿದ್ದು, ಬಿ.ಸಿ.ರೋಡ್ ನಗರ ಸೇರಿದಂತೆ ಬಂಟ್ವಾಳದಾದ್ಯಂತ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ. ಚೂರಿ ಇರಿದು ಪರಾರಿಯಾಗಿರುವ ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರಿದಿದೆ

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here