Sunday 11th, May 2025
canara news

ಜು.15ರಂದು ಜಿಲ್ಲಾ ಮಟ್ಟದ ಗುಡ್ಡಗಾಡು ಓಟ

Published On : 07 Jul 2017   |  Reported By : Bernard J Costa


ಕುಂದಾಪುರ: ವಕ್ವಾಡಿ ಸರಕಾರಿ ಪ್ರೌಢಶಾಲೆಯ ಧ್ಯಾನ್‍ಚಂದ್ ಕ್ರೀಡಾ ಸಂಘ, ಕುಂದಾಪುರ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಆಶ್ರಯದಲ್ಲಿ ಜು.15ರಂದು ಬೆಳಿಗ್ಗೆ 8 ಗಂಟೆಗೆ ವಕ್ವಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ 12/14/17ರ ವಯೋಮಿತಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗುಡ್ಡಗಾಡು ಓಟ ಸ್ಪರ್ಧೆ ನಡೆಯಲಿದೆ.ಸ್ಪರ್ಧಾಳುಗಳು ಶಾಲಾ ಮುಖ್ಯೋಪಾಧ್ಯಾಯರಿಂದ ಧೃಡೀಕರಣ ಪತ್ರದ ಜತೆಗೆ ಜನ್ಮ ದಿನಾಂಕದ ಪರಿಶೀಲನೆಗೆ ಆಧಾರ್‍ಕಾರ್ಡ್ ಅಥವಾ ಪ್ರಮಾಣಪತ್ರದ ನಕಲು ಪ್ರತಿಯನ್ನು ತರತಕ್ಕದ್ದು.

ಪ್ರಥಮ 6 ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತಿದ್ದು, ಪ್ರತಿ ವಿಭಾಗದಲ್ಲಿ 30ಕ್ಕಿಂತ ಹೆಚ್ಚು ಸ್ಪರ್ಧಿಗಳಿದ್ದಲ್ಲಿ 10 ಸ್ಥಾನ ಪಡೆಯುವ ಸ್ಪರ್ಧಿಗಳಿಗೆ ನಗದು ಬಹುಮಾನ ನೀಡಲಾಗುವುದು.ಭಾಗವಹಿಸುವವರು ಜು.13ರ ಸಂಜೆಯ ಒಳಗೆ ಪ್ರವೇಶ ಅರ್ಜಿಯನ್ನು ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here