Sunday 11th, May 2025
canara news

ಪೋಲೀಸರ ಮೇಲೆ ಹಲ್ಲೆಗೆ ಮುಂದಾದ್ರೆ ಓಪನ್ ಫೈರಿಂಗ್ - ಐಜಿಪಿ ಆರ್ಡರ್

Published On : 10 Jul 2017   |  Reported By : Canaranews Network


ಮಂಗಳೂರು: ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಶವಯಾತ್ರೆಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ ರೋಡ್, ಕೈಕಂಬದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ ಪೂರ್ವನಿಯೋಜಿತ ಕೃತ್ಯ ಎಂದು ಎಸ್ಪಿ ಸುಧೀರ್ ರೆಡ್ಡಿ ಹೇಳಿದ್ದಾರೆ.ಪೋಲೀಸರ ಮೇಲೆ ಹಲ್ಲೆಗೆ ಮುಂದಾದ್ರೆ ಓಪನ್ ಫೈರ್ ಮಾಡಲು ಪಶ್ಚಿಮ ವಲಯ ಐಜಿಪಿ ಪಿ. ಹರಿಶೇಖರನ್ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಕಲ್ಲು ತೂರಾಟ ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ. ಕಳೆದ ರಾತ್ರಿ ಮತ್ತೆ ಮೂರು ಜನರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದರು.ಈಗ ಜಿಲ್ಲೆಯಲ್ಲಿ 1300 ಪೊಲೀಸರಿಂದ ಬಂದೋಬಸ್ತ್ ಇದೆ. ಪೊಲೀಸರು ರಾತ್ರಿ ಹಗಲು ಗಸ್ತಿನಲ್ಲಿದ್ದಾರೆ. ಸ್ಥಳದಲ್ಲಿ 1 ಕೆಎಸ್ಆರ್ಪಿ, ನಾಲ್ಕೈದು ಜೀಪ್ ಗಳಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಸದ್ಯಕ್ಕೆ ಮಂಗಳೂರು ಸಹಜ ಸ್ಥಿತಿಯತ್ತ ಮರಳುತ್ತಿದೆ ಎಂದು ಎಸ್ಪಿ ಸುಧೀರ್ ರೆಡ್ಡಿ ತಿಳಿಸಿದರು.ಬಿ.ಸಿ ರೋಡ್, ಕೈಕಂಬ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಪಿ ಮತ್ತು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಬಿ.ಸಿ ರೋಡ್ ಪೊಲೀಸ್ ಠಾಣೆಯಲ್ಲಿ ಮುಂದಿನ ತೀರ್ಮಾನಗಳ ಬಗ್ಗೆ ಸಮಾಲೋಚನೆ ನಡೆಯಲಿದೆ ಎಂದರು.ಇದೊಂದು ಪೂರ್ವ ನಿಯೋಜಿತ ಕೃತ್ಯ. ಹೊರ ರಾಜ್ಯಗಳಿಂದ ಬಂದವರಿಂದ ಈ ದುಷ್ಕೃತ್ಯ ನಡೆದಿದೆ. ಗಲಾಟೆ ಎಬ್ಬಿಸಿದವರಲ್ಲಿ ಹೊರ ರಾಜ್ಯದ 3 ಮಂದಿ ಇದ್ದಾರೆ. ಸ್ಥಳೀಯರು ಅವರಿಗೆ ಸಹಕಾರ ಕೊಟ್ಟಿದ್ದಾರೆ. ಸ್ಥಳದಲ್ಲಿ ಉದ್ರಿಕ್ತರ ಗುಂಪು ಗಲಾಟೆ ಮಾಡಿದ್ದಲ್ಲ. ದುಷ್ಕರ್ಮಿಗಳ ಗುಂಪು ಸೇರಿಕೊಂಡು ಕಾನೂನು ಉಲ್ಲಂಘಿಸಿದ್ದಾರೆ ಎಂದು ಮಾಹಿತಿ ನೀಡಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here