Thursday 3rd, July 2025
canara news

ಶಾಂತಿ ಕಾಪಾಡಲು ರೈ, ಖಾದರ್ ಮನವಿ

Published On : 12 Jul 2017   |  Reported By : Canaranews Network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ - ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ಸರ್ವರೂ ಸಹಕರಿಸಬೇಕು ಹಾಗೂ ವದಂತಿಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಅವರು ಮನವಿ ಮಾಡಿದ್ದಾರೆ.

ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿನ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.ಜಿಲ್ಲೆಯಲ್ಲಿ ಕೋಮುಸಾಮರಸ್ಯ ಉಳಿಸಬೇಕು.

ಶಾಂತಿ, ಸೌಹಾರ್ದ ಕದಡುವ ಕೃತ್ಯಕ್ಕೆ ಯಾರೂ ಕೈಹಾಕಬಾರದು ಮತ್ತು ಪ್ರಚೋದನೆ ನೀಡುವ ಕಾರ್ಯ ಮಾಡಬಾರದು ಜಿಲ್ಲಾಧಿಕಾರಿಯವರು ಗುರುವಾರ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳನ್ನು ಒಳಗೊಂಡು ಶಾಂತಿಸಭೆ ನಡೆಸಲಿದ್ದಾರೆ ಎಂದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here