Saturday 10th, May 2025
canara news

ಶವಯಾತ್ರೆ ವೇಳೆ ಹಿಂಸಾಚಾರ: ಐವರು ಹಿಂದು ಮುಖಂಡರ ವಿರುದ್ಧ ಎಫ್ಐಆರ್

Published On : 12 Jul 2017   |  Reported By : Canaranews Network


ಮಂಗಳೂರು : ರಾಷ್ಟ್ರೀಯ ಸ್ವಯಂಸೇವಾ ಸಂಘದ ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆ ವೇಳೆ ಗಲಭೆ ಸೃಷ್ಠಿಸಿದ ಆರೋಪದ ಮೇಲೆ ಐವರು ಹಿಂದು ಸಂಘಟನೆಯ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ 307(ಕೊಲೆ ಯತ್ನ)ರ ಅಡಿಯಲ್ಲಿ ಎಫ್ ಐಆರ್ ದಾಖಲಾಗಿದೆ.

ಬಿಜೆಪಿಯ ಸಂಜೀವ ಆರೋಪ ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್, ಬಜರಂಗದಳ ಪ್ರಾಂತ ಸಂಯೋಜಕ ಶರಣ್ ಪಂಪ್ ವೆಲ್, ಬಜರಂಗದಳದ ಮುಖಂಡ ಪ್ರದೀಪ್ ಪಂಪ್ ವೆಲ್, ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಪೂಂಜ, ಬಜರಂಗದಳದ ದಕ್ಷಿಣ ಪ್ರಾಂತ ಗೋರಕ್ಷಾ ಪ್ರಮುಖ ಮುರಳಿಕೃಷ್ಣ ಹಸಂತಡ್ಕ ಸೇರಿದಂತೆ ಬಿಜೆಪಿ ಹಾಗೂ ಬಜರಂಗದಳದ 20ಕ್ಕೂ ಹೆಚ್ಚು ಜನರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ದಕ್ಷಿಣ ಕನ್ನಡ ಎಸ್ಪಿ ಸಿ.ಎಚ್.ಸುಧೀರ್ಕುಮಾರ್ ರೆಡ್ಡಿ ನೇತೃತ್ವದಲ್ಲಿ ಹಲವು ತಂಡಗಳು ತಲೆಮರಿಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಿವೆ. ಇವರ ವಿರುದ್ಧ ಕಾನೂನು ಬಾಹಿರವಾಗಿ ಗುಂಪು ಸೇರಿರುವುದು, ಗಲಭೆ ನಡೆಸಿರುವುದು, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು, ಶಾಂತಿಭಂಗ ಉಂಟುಮಾಡುವ ಉದ್ದೇಶದಿಂದ ನಿಂದನೆ ಮಾಡಿರುವುದು, ಅನುಚಿತ ವರ್ತನೆ, ಸರ್ಕಾರದ ಆದೇಶ ಉಲ್ಲಂಘನೆ ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ಆರೋಪಗಳಡಿ ಎಫ್ಐಆರ್ ದಾಖಲು ಮಾಡಲಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here