Sunday 23rd, July 2017
canara news

ಶರತ್ ಕೊಲೆ ಪ್ರಕರಣ: ಇಬ್ಬರು ಪೊಲೀಸ್ ವಶಕ್ಕೆ

Published On : 17 Jul 2017   |  Reported By : Canaranews Network

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಲಾಹಲಕ್ಕೆ ಕಾರಣವಾಗಿರುವ ಹಾಗೂ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿರುವ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಉನ್ನತ ಪೊಲೀಸ್ ಮೂಲಗಳ ಪ್ರಕಾರ, ಶರತ್ ಹತ್ಯೆ ಪ್ರಕರಣದ ತನಿಖೆ ಚುರುಕಗೊಂಡಿದೆ. ಕೇರಳದಿಂದ ಬಂದು ಶರತ್ ಅವರನ್ನು ಕೊಲೆ ಮಾಡಿ ಹೋಗಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆಯಾದರೂ ಪ್ರಸ್ತುತ ಪೊಲೀಸ್ ವಶದಲ್ಲಿರುವ ಈ ಇಬ್ಬರೂ ದ.ಕ. ಜಿಲ್ಲೆಯವರೇ ಎನ್ನಲಾಗಿದೆ. ಈ ಇಬ್ಬರು ಆರೋಪಿಗಳು ಶರತ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಹೆಚ್ಚಿನ ತನಿಖೆ ಬಳಿಕವಷ್ಟೇ ಗೊತ್ತಾಗಲಿದೆ. ಒಟ್ಟಾರೆ ಇನ್ನು ಕೆಲವೇ ದಿನಗಳಲ್ಲಿ ಸಾಕಷ್ಟು ಚರ್ಚೆ ಹಾಗೂ ಗದ್ದಲಕ್ಕೆ ಎಡೆ ಮಾಡಿ ರುವ ಶರತ್ ಹತ್ಯೆ ಪ್ರಕರಣದ ಆರೋಪಿಗಳ ಬಂಧನವಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

More News

ರಾಗಿಂಗ್ ಕಾಯ್ದೆ ಬಗ್ಗೆ ಕಾನೂನು ಅರಿವು – ರಾಗಿಂಗ್    ಶಿಕ್ಷಾರ್ಹ ಅಪರಾಧ ನ್ಯಾಯಧೀಶ ಡಿ.ಪಿ ಕುಮಾರಸ್ವಾಮಿ
ರಾಗಿಂಗ್ ಕಾಯ್ದೆ ಬಗ್ಗೆ ಕಾನೂನು ಅರಿವು – ರಾಗಿಂಗ್ ಶಿಕ್ಷಾರ್ಹ ಅಪರಾಧ ನ್ಯಾಯಧೀಶ ಡಿ.ಪಿ ಕುಮಾರಸ್ವಾಮಿ
 ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಶನ್ :ಪ್ರತಿಭಾ ಪುರಸ್ಕಾರ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ
ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಶನ್ :ಪ್ರತಿಭಾ ಪುರಸ್ಕಾರ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ
ಶೋಭಾ ಕರಂದ್ಲಾಜೆ ವಿರುದ್ಧ ಯು.ಟಿ ಖಾದರ್ ವಾಗ್ದಾಳಿ
ಶೋಭಾ ಕರಂದ್ಲಾಜೆ ವಿರುದ್ಧ ಯು.ಟಿ ಖಾದರ್ ವಾಗ್ದಾಳಿ

Comment Here