Thursday 22nd, February 2018
canara news

ದಕ್ಷಿಣ ಕನ್ನಡ ಜಿಲ್ಲೆಯ ಕಳೆದ ಐದು ವರ್ಷಗಳ ಕೇಸು ಕೆದಕಲಿರುವ ಪೊಲೀಸರು

Published On : 17 Jul 2017   |  Reported By : Canaranews Network


ಮಂಗಳೂರು: ಮಂಗಳೂರು ಕಮಿಷನರೇಟ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಬರುವ ಐದು ವರ್ಷದ ಹಿಂದಿನ ಎಲ್ಲಾ ಗೂಂಡಾ ಪ್ರಕರಣಗಳ ಪುನರ್ ಪರಿಶೀಲನೆ ನಡೆಸಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ಹೇಳಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಬರುವಂತಹ ಯಾವುದೇ ಭಯದ ವಾತಾವರಣ ಜಿಲ್ಲೆಯಲ್ಲಿ ಇಲ್ಲ. ಎಲ್ಲ ಸಹಜ ಸ್ಥಿತಿಯಲ್ಲಿದ್ದು, ಗಲಭೆ ಪೀಡಿತ ಬಂಟ್ವಾಳ, ವಿಟ್ಲ ಹಾಗೂ ಇತರ ಪ್ರದೇಶಗಳಿಗೆ ಸ್ವತಃ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ ಎಂದು ಹೇಳಿದರು.ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದಂತಹ ಎಲ್ಲ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿದ್ದು, ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ಆರೋಪಿಗಳನ್ನೂ ಕೂಡಲೇ ಬಂಧಿಸುತ್ತೇವೆ.

ಕೆಲವು ಮಹತ್ತರ ಸುಳಿವು ಲಭ್ಯವಾಗಿದೆ ಎಂದು ಹೇಳಿದರು. ಶರತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವ್ಯವಸ್ಥೆಯಲ್ಲಿ ಕೊಂಚ ನ್ಯೂನತೆಗಳು ಇರುವುದನ್ನು ಒಪ್ಪಿಕೊಂಡ ಅವರು, ಕಳೆದ ಐದು ವರ್ಷಗಳಲ್ಲಿ ಮಂಗಳೂರು ಕಮಿಷನರೇಟ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ನಡೆದ ಗೂಂಡಾ ಪ್ರಕರಣಗಳೆಲ್ಲವನ್ನೂ ಪುನರ್ ಪರಿಶೀಲನೆ ನಡೆಸುವಂತೆ ಈಗಾಗಲೇ ಆದೇಶ ನೀಡಲಾಗಿದೆ ಎಂದು ಹೇಳಿದರು.ಇನ್ನು,ದ.ಕ. ಜಿಲ್ಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ವ್ಯಕ್ತಿಗಳು ಮಾಧ್ಯಮಗಳಲ್ಲಿ ಉದ್ರೇಕಕಾರಿ ಹೇಳಿಕೆಗಳನ್ನು ನೀಡುತ್ತಿದ್ದು, ಇಂಥ ಹೇಳಿಕೆಗಳನ್ನು ಪ್ರಸಾರ ಮಾಡಬಾರದು ಎಂದು ಮಾಧ್ಯಮಗಳಿಗೆ ದತ್ತಾ ಮನವಿ ಮಾಡಿದರು.

 
More News

“ಗುಮಟ್ ವಿಶ್ವದಾದ್ಯಂತ ಹೆಸರುವಾಸಿಯಾದ ಕೊಂಕಣಿಗರ ಜನಪದ ಪ್ರಕಾರ”
“ಗುಮಟ್ ವಿಶ್ವದಾದ್ಯಂತ ಹೆಸರುವಾಸಿಯಾದ ಕೊಂಕಣಿಗರ ಜನಪದ ಪ್ರಕಾರ”
ಸರ್ವೋತ್ಕೃಷ್ಟ ಉತ್ಪಾದಕ ಪ್ರಶಸ್ತಿಗೆ ಭಾಜನರಾದ ಚಂದ್ರಶೇಖರ್ ಶೆಟ್ಟಿ
ಸರ್ವೋತ್ಕೃಷ್ಟ ಉತ್ಪಾದಕ ಪ್ರಶಸ್ತಿಗೆ ಭಾಜನರಾದ ಚಂದ್ರಶೇಖರ್ ಶೆಟ್ಟಿ
ಪದೇ ಪದೇ ಏಕೆ ರಾಜೀನಾಮೆ ನೀಡುತ್ತೀರಿ? ಎಂದು ಹಾಲಾಡಿಯವರನ್ನು ಪ್ರಶ್ನಿಸಿ ಮೊಳಹಳ್ಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರಾಕೇಶ್ ಮಲ್ಲಿ
ಪದೇ ಪದೇ ಏಕೆ ರಾಜೀನಾಮೆ ನೀಡುತ್ತೀರಿ? ಎಂದು ಹಾಲಾಡಿಯವರನ್ನು ಪ್ರಶ್ನಿಸಿ ಮೊಳಹಳ್ಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರಾಕೇಶ್ ಮಲ್ಲಿ

Comment Here