Thursday 18th, April 2024
canara news

ಜುಲೈ 20 ರಂದು ಮಂಗಳೂರಿನಲ್ಲಿ ಬಹು ನಿರೀಕ್ಷಿತ 'ಮಾರ್ಚ್ 22' ಸಿನೆಮಾದ ಆಡಿಯೋ ಬಿಡುಗಡೆ

Published On : 17 Jul 2017   |  Reported By : Mohammed Iqbal


ಮಂಗಳೂರು: ACME ಮೂವೀಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಬ್ಯಾನರಿನಡಿಯಲ್ಲಿ ಮಂಗಳೂರು ಮೂಲದ ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಹಾಗು ಅವರ ಧರ್ಮ ಪತ್ನಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ, ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ ನಿರ್ದೇಶನದ ಬಹು ನಿರೀಕ್ಷಿತ 'ಮಾರ್ಚ್ 22' ಸಿನೆಮಾದ ಆಡಿಯೋ ಬಿಡುಗಡೆ ಸಮಾರಂಭ ಜುಲೈ 20 ರಂದು ಮಂಗಳೂರಿನಲ್ಲಿ ನಡೆಯಲಿದೆ.

ಜುಲೈ 20 ರ ಗುರುವಾರದಂದು ಸಂಜೆ 6 ಗಂಟೆಗೆ ಮಂಗಳೂರಿನ ಪಂಪ್ವೆಲ್'ನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರಿನಲ್ಲಿ 'ಮಾರ್ಚ್ 22' ಸಿನೆಮಾದ ತಾರೆಯರ ವಿಶೇಷ ಉಪಸ್ಥಿತಿಯೊಂದಿಗೆ ಆಡಿಯೋ ಬಿಡುಗಡೆಗೊಳ್ಳಲಿದೆ.

'ಮಾರ್ಚ್ 22' ಸಿನೆಮಾದಲ್ಲಿ ಪ್ರಮುಖ ಪಾತ್ರವಹಿಸಿರುವ ಕನ್ನಡ ಸಿನೆಮಾದ ಹಿರಿಯ ನಟ ಅನಂತ್ ನಾಗ್ ಸಮಾರಂಭದಲ್ಲಿ ಆಡಿಯೋ ಬಿಡುಗಡೆ ಮಾಡಲಿದ್ದಾರೆ. ಸಿನೆಮಾದ ಹಾಡುಗಳ ಟೀಸರ್'ನ್ನು ನಟ ಆಶಿಶ್ ವಿದ್ಯಾರ್ಥಿ ಬಿಡುಗಡೆಗೊಳಿಸಲಿದ್ದಾರೆ.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರಿನ ಮೇಯರ್ ಕವಿತಾ ಸನಿಲ್, ಫಾದರ್ ಮುಲ್ಲರ್ಸ್'ನ ಡೈರೆಕ್ಟರ್ ರೇ.ಫಾದರ್ ರಿಚರ್ಡ್ ಅಲೋಸಿಯಸ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು ಧರ್ಮದರ್ಶಿ ಹರಿಕೃಷ್ಣ ಪುನರೂರು, ಖ್ಯಾತ ವೈದ್ಯ ಡಾ.ಕೆ.ವಿ.ದೇವಾಡಿಗ, ಎ.ಜೆ.ಆಸ್ಪತ್ರೆಯ ಆಡಳಿತ ನಿರ್ದೇಶಕ ಹಾಗು ಛೇರ್ಮನ್ ಡಾ.ಎ.ಜೆ.ಶೆಟ್ಟಿ, ಯೆನಪೋಯ ಯುನಿವರ್ಸಿಟಿಯ ಡಾ.ಅಖ್ತರ್ ಹುಸೈನ್, ಮರೀನ್ ಕ್ರಾಫ್ಟ್ಸ್ ಯುಕುಪ್ಮೆಂಟ್'ನ ಎಂ.ಕೆ.ಹರಿಶ್ಚಂದ್ರ ಭಾಗವಹಿಸಲಿದ್ದಾರೆ.

ಭಾರಿ ಸುದ್ದಿ ಮಾಡುತ್ತಿರುವ 'ಮಾರ್ಚ್ 22' ಸಿನೆಮಾ ಬಗ್ಗೆ
ವಿಶ್ವದ ಬೇರೆ ಯಾವುದೇ ದೇಶದಲ್ಲಿ ಇರದಷ್ಟು ಧರ್ಮಗಳು, ಜಾತಿಗಳು ಭಾರತದಲ್ಲಿವೆ. ವೈವಿಧ್ಯಮಯ ಧಾರ್ಮಿಕ ನಂಬಿಕೆಗಳ ಹೊರತಾಗಿಯೂ, ಇಲ್ಲಿ ಜನರು ಬಹಳ ಅನ್ಯೋನ್ಯತೆಯಿಂದ ಮತ್ತು ಸ್ನೇಹದಿಂದ ಬದುಕುತ್ತಿದ್ದಾರೆ. ಭಾರತೀಯೇತರ ಪ್ರಜೆ ಊಹಿಸಲು ಆಗದ ರೀತಿಯ ಸೌಹಾರ್ದತೆಯ ಬದುಕು ಇಲ್ಲಿ ಕಾಣಬಹುದು. ಆದಾಗ್ಯೂ ಹಿಂದೂಗಳು ಮತ್ತು ಮುಸ್ಲೀಮರ ನಡುವಿನ ಸಂಬಂಧಕ್ಕೆ ಕೆಲವೊಮ್ಮೆ ಕೆಲವು ಪ್ರಚೋದನೆಗಳಿಂದಾಗಿ ಧಕ್ಕೆ ಬಂದಿರುವುದು ಕೂಡ ಸತ್ಯ. ದೇಶದ ಇತಿಹಾಸದಲ್ಲಿ ಇದು ದೊಡ್ಡ ಗಾಯದಂತಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದಿದ್ದರು ಈ ಕಹಿ ನೆನಪು ಹಾಗೆಯೇ ಇದೆ. ಇದನ್ನು ಗಮನದಲ್ಲಿಟ್ಟುಕೊಂಡು 'ಮಾರ್ಚ್ 22' ಸಿನೆಮಾ ತಂಡ ಕನ್ನಡ ಚಿತ್ರರಂಗದಲ್ಲಿ ಇದೇ ಮೊದಲ ಬಾರಿಗೆ ವಾಸ್ತವಿಕ ಪರಿಕಲ್ಪನೆಯೊಂದಿಗೆ ಅದ್ಭುತ ಕಥೆಯೊಂದನ್ನು ಜನ ಎಂದೆಂದಿಗೂ ನೆನಪಿಡುವಂತೆ ಮಾಡುವ ಪ್ರಯತ್ನಕ್ಕೆ ಮುಂದಾಗಿದೆ.

'ಮಾರ್ಚ್ 22' ಸಿನೆಮಾ ಮೂಲಕ ಸಮಾಜಕ್ಕೆ ಹೊಸ ಮತ್ತು ಅರ್ಥಪೂರ್ಣ ಸಂದೇಶ ನೀಡಲು ಈ ತಂಡ ಸಿದ್ಧತೆ ನಡೆಸಿದೆ. ಇಂಥ ಸಾಮಾಜಿಕ ಕಳಕಳಿಯುಳ್ಳ, ಸಮಾಜದಲ್ಲಿ ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯಬಲ್ಲ, ಸದಭಿರುಚಿಯ ಸಿನೆಮಾವನ್ನು ಮಂಗಳೂರು ಮೂಲದ ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಹಾಗು ಅವರ ಧರ್ಮ ಪತ್ನಿ ಶರ್ಮಿಳಾ ಶೇರಿಗಾರ್ ನಿರ್ಮಿಸಿದ್ದಾರೆ. ಹರೀಶ್ ಶೇರಿಗಾರ್ ಅವರ ACME ಮೂವೀಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಬ್ಯಾನರಿನಡಿಯಲ್ಲಿ ನಿರ್ಮಿಸಲಾಗಿರುವ 'ಮಾರ್ಚ್ 22' ಸಿನೆಮಾ ಬಗ್ಗೆ ಕನ್ನಡ ಸಿನೆಮಾ ಪ್ರಿಯರು ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಜೀವಜಲದ ಮಹತ್ವ ಮತ್ತು ಜಾಗೃತಿಯ ಸಂದೇಶ ಸಾರುವ "ಮಾರ್ಚ್-22" ಸಿನೆಮಾದ ಬಗ್ಗೆ ಕನ್ನಡ ಸಿನಿಮಾಭಿಮಾನಿಗಳು ಬಹುನಿರೀಕ್ಷೆಯನ್ನಿಟ್ಟು ಕೊಂಡಿದ್ದು, ಸಿನೆಮಾ ಬಿಡುಗಡೆಗೂ ಮುನ್ನವೇ ಭಾರಿ ಸುದ್ದಿ ಮಾಡುತ್ತಿದೆ.

ದುಬೈನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಹೆಸರಾಂತ ಉದ್ಯಮಿ ಹಾಗೂ ಕನ್ನಡಿಗ ಪದ್ಮಶ್ರೀ ಡಾ. ಬಿ.ಆರ್ ಶೆಟ್ಟಿ ಚಿತ್ರದ ಹಾಡೊಂದರಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಇನ್ನುಳಿದಂತೆ ಅನಂತ್‍ನಾಗ್, ಗೀತಾ ಜೊತೆ ಹಿರಿಯ ಕಲಾವಿದರಾದ ರಮೇಶ್ ಭಟ್, ಶರತ್ ಲೋಹಿತಾಶ್ವ, ಅಶೀಷ್ ವಿದ್ಯಾರ್ಥಿ, ಸಾಧು ಕೋಕಿಲಾ, ಜೈಜಗದೀಶ್, ವಿನಯಾ ಪ್ರಸಾದ್, ಪದ್ಮಜಾ ರಾವ್ ಸೇರಿದಂತೆ ಹಲವು ಹಿರಿಯ ನಟ-ನಟಿಯರೊಂದಿಗೆ ಆರ್ಯವರ್ಧನ್ ಮತ್ತು ಕಿರಣ್ ರಾಜ್ ನಾಯಕರಾಗಿ ಕಾಣಿಸಿಕೊಂಡಿದ್ದು, ಮೇಘಶ್ರೀ ಮತ್ತು ದೀಪ್ತಿ ಶೆಟ್ಟಿ ನಾಯಕಿಯರಾಗಿ ತಮ್ಮ ನಟನೆಯನ್ನು ಮುಂದಿಟ್ಟಿದ್ದಾರೆ. ಜೊತೆಗೆ ಕಿಶೋರ್, ಸೃಜನ್ ರೈ, ಶಾಂತಾ ಆಚಾರ್ಯ, ದುಬೈಯ ರಂಗಭೂಮಿ ಕಲಾವಿದರಾದ ಚಿದಾನಂದ ಪೂಜಾರಿ, ಸುವರ್ಣ ಸತೀಶ್, ಮಂಗಳೂರಿನ ದೀಪ್ತಿ ಶೆಟ್ಟಿ, ಪ್ರಶೋಭಿತ ಮುಂತಾದವರು ನಟಿಸುತ್ತಿದ್ದಾರೆ. ಮಣಿಕಾಂತ್ ಕದ್ರಿ ಹಾಗು ರವಿಶೇಕರ್ ಸಂಗೀತ ನೀಡಿದ್ದಾರೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here