Sunday 28th, April 2024
canara news

ಶರತ್ ಹತ್ಯೆ ಪ್ರಕರಣ: ಎನ್ಐಎ ತನಿಖೆಗೆ ಕೇಂದ್ರ ಗೃಹ ಸಚಿವರಿಗೆ ಮನವಿ

Published On : 18 Jul 2017   |  Reported By : Canaranews Network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಬಳಿ RSS ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ಕುರಿತು ರಾಷ್ಟ್ರೀಯ ತನಿಖಾ ದಳದಿಂದ (ಎನ್ಐಎ) ತನಿಖೆ ನಡೆಸಬೇಕು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಸಂಬಂಧ ರಾಜ್ಯ ಸರ್ಕಾರದಿಂದ ವರದಿ ತರಿಸಿಕೊಂಡು ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ನೇತೃತ್ವದಲ್ಲಿ ಬಿಜೆಪಿ ಸಂಸದರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ.

ಸೋಮವಾರ ದೆಹಲಿಯಲ್ಲಿ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ನಳಿನ್ ಕುಮಾರ್ ಕಟೀಲ್ ಅವರು, ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಹಿಂದೂ ಯುವಕರ ಹತ್ಯೆ, ಹತ್ಯೆ ಯತ್ನದ ಮಾಹಿತಿ ನೀಡಿ, ಇದಕ್ಕೆ ಕಾರಣವಾಗುತ್ತಿರುವ ಇಸ್ಲಾಂ ಮೂಲಭೂತವಾದಿ ಸಂಘಟನೆಗಳಾದ ಕೆಎಫ್ಡಿ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here