Saturday 11th, May 2024
canara news

ದ.ಕ.ಜಿಲ್ಲೆಯಲ್ಲಿ ಜುಲೈ 30ರವರೆಗೆ ನಿಷೇಧಾಜ್ಞೆ ಮುಂದುವರಿಕೆ

Published On : 18 Jul 2017   |  Reported By : Canaranews Network


ಮಂಗಳೂರು; ದ.ಕ.ಜಿಲ್ಲೆಯಲ್ಲಿ ಇತ್ತೀಚೆಗೆ ಉಂಟಾದ ಕೋಮು ಗಲಭೆ, ಘರ್ಷಣೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ಜುಲೈ 30ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ 1963ರ ಪ್ರಕಾರ, ಸೆಕ್ಷನ್ 35ರಡಿಯಲ್ಲಿ ಭಾನುವಾರ ಬೆಳಗ್ಗೆ 6 ಗಂಟೆಯಿಂದ ಜುಲೈ 30ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಆದೇಶ ಹೊರಡಿಸಿದ್ದಾರೆ.

ಪ್ರಚೋದನೆಗೆ ಕಾರಣವಾಗುವ, ಸಾರ್ವಜನಿಕ ಆದೇಶಗಳ ಮೇಲೆ ಪರಿಣಾಮ ಬೀರುವ ಮತ್ತು ಭದ್ರತೆಗಳನ್ನು ದುರ್ಬಲಗೊಳಿಸುವ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ಆಯುಕ್ತರು ಹೊರಡಿಸಿರುವ ಆದೇಶದಲ್ಲಿ ಸೂಚಿಸಲಾಗಿದೆ. ಸಮಾಜದ ಶಾಂತಿಯನ್ನು ಕೆಡಿಸುವ ಯಾವುದೇ ಅಹಿತಕರ ಘಟನೆಗಳು ಮುಂದಿನ ದಿನಗಳಲ್ಲಿ ಸಂಭವಿಸದಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.




More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here