Sunday 28th, April 2024
canara news

ಮಂಗಳೂರಿನಲ್ಲಿ ರನ್ವೇ ಲೈಟ್ ಗೆ ಡಿಕ್ಕಿ ಹೊಡೆದ ಏರ್ ಇಂಡಿಯಾ

Published On : 18 Jul 2017   |  Reported By : Canaranews Network


ಮಂಗಳೂರು: ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಏರ್ಇಂಡಿಯಾ ವಿಮಾನ ರನ್ವೇಯಲ್ಲಿ ಅಳವಡಿಸಿದ್ದ ರನ್ ವೇ ಲೈಟ್ ಗೆ ಡಿಕ್ಕಿ ಹೊಡೆದ ಘಟನೆ ಭಾನುವಾರ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಏರ್ ಇಂಡಿಯಾ ವಿಮಾನದಲ್ಲಿದ್ದ 186 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

814 ಏರ್ ಇಂಡಿಯಾ ವಿಮಾನವು ಭಾನುವಾರ ಮುಂಜಾನೆ ದುಬೈನಿಂದ ಮಂಗಳೂರು ಏರ್ಪೋರ್ಟ್ಗೆ ಆಗಮಿಸಿತ್ತು. 186 ಮಂದಿ ಪ್ರಯಾಣಿಕರನ್ನು ಹೊತ್ತ ವಿಮಾನವು ರನ್ವೇನಲ್ಲಿ ಇಳಿಯುತ್ತಿದ್ದಂತೆ ಅಲ್ಲಿ ಅಳವಡಿಸಲಾಗಿದ್ದ ರನ್ ವೇ ಲೈಟ್ ಗೆ ಹೊಡೆದಿದೆ. ಆದರೆ ಇದರಿಂದ ವಿಮಾನಕ್ಕೆ ಯಾವುದೇ ಹಾನಿಯಾಗಿಲ್ಲ.ಮೇಲ್ನೋಟಕ್ಕೆ ವಿಮಾನ ಇಳಿಯುವಾಗ ಘಟನೆ ನಡೆದಿರುವುದು ದೃಢಪಟ್ಟಿಲ್ಲ ಎಂದು ಸುರಕ್ಷತಾ ವಿಭಾಗದ ಪ್ರಾಥಮಿಕ ತನಿಖೆ ನಡೆಸಿದ್ದ,ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಘಟನೆಯ ಕುರಿತು ವಿಮಾನಯಾನ ನಿರ್ದೇಶನಾಲಯವು ಆಂತರಿಕ ತನಿಖೆಗೆ ಆದೇಶಿಸಿದೆ ಎಂದು ತಿಳಿದು ಬಂದಿದೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here