Saturday 10th, May 2025
canara news

ಶೋಭಾ ಕರಂದ್ಲಾಜೆ ಸಲ್ಲಿಸಿದ ಮನವಿ ಪತ್ರಕ್ಕೆ ವ್ಯಾಪಕ ಟೀಕೆ

Published On : 20 Jul 2017


ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಬಂದ ಮೇಲೆ ಆರ್ಎಸ್ಸೆಸ್, ಹಿಂದೂ ಹಾಗೂ ಬಿಜೆಪಿ ಮುಖಂಡರ ಹತ್ಯೆ ಆಗಿರುವ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹಸಚಿವರಿಗೆ ಸಲ್ಲಿಸಿರುವ ದೂರಿನಲ್ಲಿ ಜೀವಂತವಾಗಿರುವ ವ್ಯಕ್ತಿಗಳ ಹೆಸರನ್ನು ಉಲ್ಲೇಖೀಸಿರುವುದು ಇದೀಗ ಭಾರೀ ವಿವಾದಕ್ಕೆ ಎಡೆಮಾಡಿದೆ.
ಸಿದ್ದರಾಮಯ್ಯ ನೇತೃತ್ವದ ಸರಕಾರದ ನಾಲ್ಕು ವರ್ಷಗಳ ಆಡಳಿತಾವಧಿಯಲ್ಲಿ ಹಿಂದೂ/ ಆರೆಸ್ಸೆಸ್/ ಬಿಜೆಪಿ ಕಾರ್ಯ ಕರ್ತರನ್ನು ಗುರಿಯಾಗಿಸಿಕೊಂಡು ಸಾಕಷ್ಟು ಕೊಲೆ ಮತ್ತು ಹಲ್ಲೆ ಪ್ರಕರಣಗಳು ನಡೆದಿವೆ ಎಂದು ಆರೋಪಿಸಿ ಶೋಭಾ ಅವರು ಎರಡು ದಿನಗಳ ಹಿಂದೆಯಷ್ಟೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ನೀಡಿದ್ದರು.

ಈ ಮನವಿಯಲ್ಲಿ ಕಳೆದ 4 ವರ್ಷಗಳ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಒಟ್ಟು 23 ಮಂದಿ ಹಿಂದೂ/ ಆರೆಸ್ಸೆಸ್/ ಬಿಜೆಪಿ ಕಾರ್ಯಕರ್ತರ ಕೊಲೆಯಾಗಿದೆ; ಜತೆಗೆ, ಕಳೆದ ಮೂರು ವರ್ಷಗಳಲ್ಲಿ ಆರು ಮಂದಿ ಹಲ್ಲೆಗೊಳಗಾಗಿದ್ದಾರೆ ಎಂದು ಶೋಭಾ ಉಲ್ಲೇಖೀಸಿದ್ದಾರೆ. ಹೀಗೆ ಸಂಸದೆ ಶೋಭಾ ಅವರು ಕೇಂದ್ರ ಗೃಹಸಚಿವರಿಗೆ ಸಲ್ಲಿಸಿರುವ ಮನವಿಯಲ್ಲಿ ಹೇಳಿರುವ ವಿಚಾರದಲ್ಲಿ ಕೆಲವೊಂದು ಅಂಶಗಳು ಸತ್ಯಕ್ಕೆ ದೂರವಾಗಿದ್ದು, ಸಾರ್ವಜನಿಕ ವಲಯದಲ್ಲಿ ಅವರ ವಿರುದ್ಧ ವ್ಯಾಪಕ ಆಕ್ರೋಶ, ಟೀಕೆಗಳು ವ್ಯಕ್ತವಾಗಿವೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here