Thursday 3rd, July 2025
canara news

ಭಾರೀ ಮಳೆಗೆ ತುಂಬಿ ಹರಿಯುತ್ತಿರುವ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ

Published On : 20 Jul 2017   |  Reported By : Canaranews Network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ, ಮಳೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಸ್ನಾನ ಘಟ್ಟ ಸಂಪೂರ್ಣವಾಗಿ ಜಲಾವೃತವಾಗಿದ್ದು, ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳು ನದಿಯ ಮೇಲ್ಭಾಗದಲ್ಲಿ ತೀರ್ಥ ಸ್ನಾನ ಪೂರೈಸುತ್ತಿದ್ದಾರೆ.

ಕರ್ನಾಟಕ ಕರಾವಳಿಯಲ್ಲಿ ಎಡೆಬಿಡದೆ ಸುರಿಯುತ್ತಿದೆ ಭಾರೀ ಮಳೆ ಅಲ್ಲದೆ ಘಟ್ಟ ಪ್ರದೇಶದಲ್ಲಿ ಇದೇ ರೀತಿ ನಿರಂತರ ಮಳೆಯಾದರೆ ಕುಮಾರಧಾರಾ ಸೇತುವೆ ಮುಳುಗಡೆಯಾಗುವ ಸಾಧ್ಯತೆ ಇದೆ. ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಸೇತುವೆ ಮಟ್ಟದಲ್ಲಿ ನದಿ ನೀರು ಹರಿಯುತ್ತಿದೆ.ಕೊಲ್ಲಮೊಗ್ರು, ಕಲ್ಮಕಾರು, ಗುತ್ತಿಗಾರು, ಪಂಜ, ಬಳ್ಪ, ನಿಂತಿಕಲ್ ಮೊದಲಾದೆಡೆ ನಿರಂತರ ಮಳೆಯಾದುದರಿಂದ ಈ ಪರಿಸರದಲ್ಲಿ ಹರಿಯುವ ನದಿ, ತೊರೆಗಳು ತುಂಬಿ ಹರಿಯುತ್ತಿವೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here