Thursday 2nd, May 2024
canara news

ಟಾರ್ಗೆಟ್ ಮಾಡಿ ಮಾನಸಿಕ ಹಿಂಸೆ ಮಾಡುವುದು ಸರಿಯಲ್ಲ: ಮೋಹನ್ ಆಳ್ವ

Published On : 30 Jul 2017   |  Reported By : Canaranews network


ಮಂಗಳೂರು : ಜವಾಬ್ದಾರಿಯುತ ಸ್ಥಾನದಲ್ಲಿರುವ ನನ್ನನ್ನು ಹಾಗೂ ಕಳೆದ ಎರಡೂವರೆ ದಶಕಗಳಿಂದ ಪಾರದರ್ಶಕವಾಗಿ ಶಿಕ್ಷಣ ನೀಡುತ್ತಿರುವ ಆಳ್ವಾಸ್ ಸಂಸ್ಥೆಯನ್ನು ಟಾರ್ಗೆಟ್ ಮಾಡುವುದರ ಮೂಲಕ ನಮಗೆ ಮಾನಸಿಕ ಹಿಂಸೆ ನೀಡುತ್ತಿರುವುದು ಸರಿಯಲ್ಲ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪ್ರತಿಕ್ರಿಯಿಸಿದ್ದಾರೆ.

ಕಾವ್ಯಾ ಸಾವಿನ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಯಾವುದೇ ಅಪರಾಧ ನಡೆದರೆ ಅದು ಪೊಲೀಸ್ ತನಿಖೆಯಾಗಬೇಕು. ಆದರೆ ಸಮಾಜದಲ್ಲಿ ಗೊಂದಲ ಸೃಷ್ಟಿಸಬಾರದು ಎಂದಿದ್ದಾರೆ.ಆಳ್ವಾಸ್ ಶಿಕ್ಷಣ ಸಂಸ್ಥೆಯ ಬ್ಯಾಡ್ಮಿಂಟನ್ ಕ್ರೀಡಾಪಟು ವಿದ್ಯಾರ್ಥಿನಿ ಕಾವ್ಯಾಳ ಸಂಶಯಾಸ್ಪದ ಸಾವಿನ ಕುರಿತು ಆಡಳಿತ ವ್ಯವಸ್ಥೆಯು ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದ್ದು, ಕಾವ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ, ಮಾಧ್ಯಮ ಅಥವಾ ವೈಯಕ್ತಿಕವಾಗಿ ಯಾರೇ ತನಿಖೆ ಮುಂದಾದರೂ ಯಾವುದೇ ತನಿಖೆಗೆ ಸಂಸ್ಥೆ ಸಿದ್ಧವಿದೆ.

ನಮ್ಮ ಸಂಸ್ಥೆಯಲ್ಲಿ ಕೊಲೆ ಪ್ರಕರಣ ಎಂದಿಗೂ ನಡೆದಿಲ್ಲ ಎಂದರು. ಸಂಸ್ಥೆಯಲ್ಲಿ ಕಲಿಯುತ್ತಿರುವ 26 ಸಾವಿರ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ನಮ್ಮನ್ನೇ ನಂಬಿದ್ದಾರೆ. ಮಾಧ್ಯಮ ಅಥವಾ ವೈಯಕ್ತಿಕವಾಗಿ ಯಾರೇ ತನಿಖೆ ಮುಂದಾದರೂ ಯಾವುದೇ ತನಿಖೆಗೆ ಸಂಸ್ಥೆ ಸಿದ್ಧವಿದೆ. ಕಾವ್ಯಾ ಆತ್ಮಹತ್ಯೆ ಪ್ರಕರಣದ ತನಿಖೆ ಸರಿಯಾದ ರೀತಿಯಲ್ಲಿ ಆಗಿ, ಶೀಘ್ರವೇ ಸತ್ಯಾಂಶ ಹೊರಬರಲಿ ಎಂದು ಮೋಹನ್ ಆಳ್ವ ಹೇಳಿದ್ದಾರೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here