Thursday 3rd, July 2025
canara news

ಅಗಸ್ಟ್ 1 : ಕುಂದಾಪುರ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶ

Published On : 31 Jul 2017


ಅಗಸ್ಟ್ 1 ಮಂಗಳವಾರ ಮಧ್ಯಾಹ್ನ ಗಂಟೆ 2.30ಕ್ಕೆ ಕುಂದಾಪುರದ ಆರ್.ಎನ್.ಶೆಟ್ಟಿ ಹಾಲ್‍ನಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್, ವೀಕ್ಷಕ ಪಿ.ಸಿ.ವಿಷ್ಣುನಂದನ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಪ್ರತಾಪ್‍ಚಂದ್ರ ಶೆಟ್ಟಿ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳಾದ ಯು.ಆರ್.ಸಭಾಪತಿ, ಎಂ.ಎ. ಗಫೂರ್, ಗೋಪಾಲ ಭಂಡಾರಿ, ಕೆ.ಪಿ.ಸಿ.ಸಿ. ಕಾರ್ಯದರ್ಶಿ ವರೋನಿಕಾ ಕರ್ನೆಲಿಯೋ, ಕಾಪು ಶಾಸಕ ಹಾಗೂ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕುಂದಾಪುರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಹಾಗೂ ಕೋಟ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಶಂಕರ ಕುಂದರ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here