Saturday 10th, May 2025
canara news

ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಸಾವು ಪ್ರಕರಣ: ತನಿಖೆ ಚುರುಕು

Published On : 01 Aug 2017   |  Reported By : Canaranews network


ಮಂಗಳೂರು: ಮೂಡಬಿದಿರೆಯ ಆಳ್ವಾಸ್ ವಿದ್ಯಾ ಸಂಸ್ಥೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವಿನ ಕುರಿತ ತನಿಖೆಯನ್ನು ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ರಾಜೇಂದ್ರ ಡಿ.ಎಸ್. ನೇತೃತ್ವದ ಪೊಲೀಸರ ತಂಡ ಚುರುಕುಗೊಳಿಸಿದೆ.ಭಾನುವಾರ ಪೊಲೀಸರು ಕಟೀಲು ಸಮೀಪದ ದೇವರಗುಡ್ಡೆಯಲ್ಲಿರುವ ಕಾವ್ಯಾ ಮನೆಗೆ ತೆರಳಿ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿ ಹೇಳಿಕೆಗಳನ್ನು ಪಡೆದುಕೊಂಡರು.ಎಸಿಪಿ ರಾಜೇಂದ್ರ ಡಿ.ಎಸ್. ಮತ್ತು ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಮಚಂದ್ರ ಹಾಗೂ ಸಿಬಂದಿ ಇಡೀ ದಿನ ಕಾವ್ಯಾ ಮನೆಯಲ್ಲಿದ್ದು, ಆಕೆಯ ತಂದೆ ಲೋಕೇಶ್ ಪೂಜಾರಿ ಮತ್ತು ತಾಯಿ ಬೇಬಿ ಅವರನ್ನು ವಿಚಾರಣೆಗೆ ಒಳಪಡಿಸಿದರು. ರವಿವಾರ ಬೆಳಗ್ಗೆ ಪ್ರಾರಂಭಗೊಂಡ ವಿಚಾರಣೆ ಸಂಜೆವರೆಗೆ ಮುಂದುವರಿದಿತ್ತು ಎನ್ನಲಾಗಿದೆ.


ಗಣ್ಯರ ಭೇಟಿ; ಸಾಂತ್ವನ
ಕಟೀಲು ದೇವರಗುಡ್ಡೆಯಲ್ಲಿರುವ ಕಾವ್ಯಾ ಮನೆಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಸಹಿತ ಅನೇಕ ಮಂದಿ ಗಣ್ಯರು ಭೇಟಿ ನೀಡಿ ಆಕೆಯ ಹೆತ್ತವರಿಗೆ ಸಾಂತ್ವನ ಹೇಳಿದರು.

ಸಚಿವ ಬಿ. ರಮಾನಾಥ ರೈ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ'ಸೋಜಾ, ಶಾಸಕರಾದ ಕೆ. ಅಭಯಚಂದ್ರ ಜೈನ್ ಮತ್ತು ಶಕುಂತಳಾ ಶೆಟ್ಟಿ, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ, ಬಿಲ್ಲವ ಮಹಾ ಮಂಡಲದ ಮುಖಂಡ ಹರಿಕೃಷ್ಣ ಬಂಟ್ವಾಳ, ಸಿಪಿಐಎಂ ರಾಜ್ಯ ಕಾರ್ಯದರ್ಶಿ ಶ್ರೀರಾಮ ರೆಡ್ಡಿ ಅವರು ಮನೆಗೆ ಭೇಟಿ ಭೇಟಿ ನೀಡಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here