Saturday 10th, May 2025
canara news

ಬೀಜಾಡಿ:ಕಟ್ಟಡ ಕಾರ್ಮಿಕರ ನೋಂದಣಿ ಶಿಬಿರ ಉದ್ಘಾಟನೆ

Published On : 08 Aug 2017   |  Reported By : Bernard J Costa


ಕುಂದಾಪುರ:ಕಟ್ಟಡ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ನೊಂದಣೆಯನ್ನು ಮಾಡಿಸಿಕೊಳ್ಳುವುದರ ಮೂಲಕ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.ಪ್ರತಿ ಪಂಚಾಯಿತಿಯಿಂದ ಕಾರ್ಮಿಕ ನಿಧಿಗೆ ಒಂದಷ್ಟು ಹಣ ಸಂದಾಯವಾಗುತ್ತಿದ್ದು, ಅದನ್ನು ಕಾರ್ಮಿಕರು ಸರಿಯಾಗಿ ಬಳಸೊಕೊಳ್ಳಲು ಮಾಹಿತಿಯ ಕೊರತೆ ಇತ್ತು.ಇಂತಹ ಶಿಬಿರಗಳ ಮೂಲಕ ಕಾರ್ಮಿಕರಲ್ಲಿ ಜಾಗೃತಿ ಮೂಡಿದೆ ಎಂದು ಬೀಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಾಕು ಹೇಳಿದರು.

 

ಅವರು ಭಾನುವಾರ ಬೀಜಾಡಿ ಮಿತ್ರಸೌಧದಲ್ಲಿ ಬೀಜಾಡಿ ಗ್ರಾಮ ಪಂಚಾಯಿತಿ, ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ಆಶ್ರಯದಲ್ಲಿ ನಡೆದ ಕಟ್ಟಡ ಕಾರ್ಮಿಕರ ನೋಂದಣಿ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿಬಿರವನ್ನು ಬೀಜಾಡಿ ಗ್ರಾಮ ಪಂಚಾಯಿತಿಯ ಹಿರಿಯ ಸದಸ್ಯ ಶೇಖರ ಛಾತ್ರಬೆಟ್ಟು ಉದ್ಘಾಟಿಸಿ ಮಾತನಾಡಿದರು. ನಿರಂತರ ಟ್ರಸ್ಟ್ ಅಧ್ಯಕ್ಷ ಮಂಜುನಾಥ್ ನಾಯ್ಕ್ ಕಟ್ಟಡ ಕಾರ್ಮಿಕರಿಗೆ ಸಿಗುವ ಸೌಲಭ್ಯದ ಕುರಿತು ಮಾತನಾಡಿದರು.

ವೇದಿಕೆಯಲ್ಲಿ ಬೀಜಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಂತಿ ಗಾಣಿಗ, ಸದಸ್ಯರಾದ ಬಿ.ವಾದಿರಾಜ ಹೆಬ್ಬಾರ್,ಧನಂಜಯ ಅರಸ್, ಜಸಿಂತಾ ಡಿ.ಮೆಲ್ಲೋ ಮೊದಲಾದವರು ಉಪಸ್ಥಿತರಿದ್ದರು.
ಬೀಜಾಡಿ ಮಿತ್ರ ಸಂಗಮದ ಅಧ್ಯಕ್ಷ ಬಿ.ಜಿ.ನಾಗರಾಜ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಕಾಂತ ಭಟ್ ವಂದಿಸಿದರು.ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here