Thursday 14th, December 2017
canara news

ಎ.ಸಿ ಭಂಡಾರಿ ಕರ್ನಾಟಕರ ರಾಜ್ಯ ತುಳು ಅಕಾಡಮಿ ನೂತನ ಅಧ್ಯಕ್ಷ ಮುಂಬಯಿಯ ವಿವಿಧ ಸಂಸ್ಥೆಗಳಿಂದ ಅಭಿನಂದನೆಗಳ ಮಹಾಪೂರ

Published On : 10 Aug 2017   |  Reported By : Rons Bantwal


ಮುಂಬಯಿ, ಆ.10: ಕರ್ನಾಟಕರ ರಾಜ್ಯ ತುಳು ಅಕಾಡಮಿ ಅಧ್ಯಕ್ಷರಾಗಿ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದ ಧುರೀಣ ಎ.ಸಿ. ಭಂಡಾರಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ, ಶ್ರೀ ನಂದಾವರ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದ ಆಡಳಿತ ವಿಶ್ವಸ್ಥರಾಗಿ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ವಿವಿಧ ಕ್ಷೇತ್ರಗಳಲ್ಲಿ ಸಕ್ರೀಯರಾಗಿ ಸೇವಾ ನಿರತ ಎ.ಸಿ ಭಂಡಾರಿ (ಅಂಬಡೆಬೈಲು ಚಂದ್ರಶೇಖರ ಭಂಡಾರಿ) ಅವರು ಅಖಿಲ ಭಾರತ ತುಳು ಒಕ್ಕೂಟದ ಗೌರವ ಸಲಹಾಗಾರಾಗಿ ತುಳುಭಾಷೆ, ಸಂಸ್ಕೃತಿ ಮತ್ತು ತುಳುವನ್ನು ರಾಷ್ಟ್ರದ ಎಂಟನೇ ಪರಿಚ್ಛೇಯದಲ್ಲಿ ಸೇರಿಸುವ ಕಾಯಕದಲ್ಲಿ ತೊಡಗಿಸಿ ಕೊಂಡಿದ್ದಾರೆ.

1942ರ ಸಪ್ಟೆಂಬರ್ 26ರಂದು ರಾಮಯ್ಯ ಭಂಡಾರಿ ಮತ್ತು ತಂಕಾಜು ಆರ್.ಭಂಡಾರಿ ಸುಪುತ್ರರಾಗಿ ಜನಿಸಿದ ಇವರು ಕೊಡಿಯಾಲ್‍ಬೈಲ್‍ನಲ್ಲಿ ಪ್ರೌಢ ವಿದ್ಯಾಭ್ಯಾಸ ಪೂರೈಸಿದ್ದರು. 1965ರಲ್ಲಿ ಸ್ವಂತಿಕೆಯ ಮಂಗಳೂರು ಕದ್ರಿಯಲ್ಲಿ ವಿಜಯ ಟೈಪ್‍ರೇಟಿಂಗ್ ಇನ್ಸ್ಟಿಟ್ಯೂಟ್ ಆರಂಭಿಸಿದ ಇವರ ಈ ಸಂಸ್ಥೆಗೆ 1968ರಲ್ಲಿ ಕರ್ನಾಟಕ ರಾಜ್ಯ ಸರಕಾರದ ಮಾನ್ಯತೆ ದೊರೆತ್ತಿದ್ದು ನಂತರ ಈ ಸಂಸ್ಥೆಯ ಪ್ರಾಂಶುಪಾಲರಾಗಿ ದೀರ್ಘಾವಧಿ ಸೇವೆ ಸಲ್ಲಿಸಿ ಜನಾನುರಾಗಿದ್ದರು.

ಪತ್ನಿ ರಾಜೀವಿ ಚಂದ್ರಶೇಖರ್ ಅವರನ್ನೊಳಗೊಂಡು ಇತ್ತೀಚೆಗಷ್ಟೇ ವೈವಾಹಿಕ ಜೀವನದ ಸ್ವರ್ಣ ಸಂಭ್ರಮಿಸಿ ಇದೀಗ ತುಳು ಅಕಾಡಮಿ ಅಧ್ಯಕ್ಷರಾಗಿ ನೇಮಕಗೊಂಡ ಭಂಡಾರಿ ಅವರಿಗೆ ಅಖಿಲಭಾರತ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ್ ಯು.ದೇವಾಡಿಗ, ಗೌ| ಪ್ರ| ಕಾರ್ಯದರ್ಶಿ ನಿಟ್ಟೆ ಶಸಿಧರ್ ಶೆಟ್ಟಿ, ಜಾಗತಿಕ ಬಂಟರ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್.ಶೆಟ್ಟಿ ಉಪಾಧ್ಯಕ್ಷ ಪದ್ಮನಾಭ ಎಸ್.ಪಯ್ಯಡೆ, ಗೌ| ಪ್ರ| ಕಾರ್ಯದರ್ಶಿ ಉಳ್ತೂರು ಮೋಹನ್‍ದಾಸ್ ಶೆಟ್ಟಿ, ಗೌ| ಕೋಶಾಧಿಕಾರಿ ಸಿಎ| ಐ.ಆರ್ ಶೆಟ್ಟಿ, ಜತೆ ಕಾರ್ಯದರ್ಶಿ ಕಿಶೋರ್‍ಕುಮಾರ್ ಶೆಟ್ಟಿ ಕುತ್ಯಾರ್, ಜತೆ ಕೋಶಾಧಿಕಾರಿ ಮಹೇಶ್ ಎಸ್.ಶೆಟ್ಟಿ, ಮಹಿಳಾ ವಿಭಾಗಧ್ಯಕ್ಷೆ ಲತಾ ಜಯರಾಮ ಶೆಟ್ಟಿ, ಯುವ ವಿಭಾಗಧ್ಯಕ್ಷ ವಿವೇಕ್ ವಿ.ಶೆಟ್ಟಿ, ಸಾಂಸ್ಕೃತಿಕ ಮತ್ತು ಸಾಹಿತ್ಯ ಸಮಿತಿ ಕಾರ್ಯಧ್ಯಕ್ಷ ರವೀಂದ್ರನಾಥ ಎಂ.ಭಂಡಾರಿ, `ಬಂಟರವಾಣಿ' ಮಾಸಿಕದ ಪ್ರಧಾನ ಸಂಪಾದಕ ಅಶೋಕ್ ಪಕ್ಕಳ, ಭವಾನಿ ಫೌಂಡೇಶನ್‍ನ ದಡ್ದಂಗಡಿ ಚೆಲ್ಲಡ್ಕ ಕುಸುಮೋದÀರ ಡಿ.ಶೆಟ್ಟಿ, ಹಿರಿಯ ಸಾಹಿತಿ, ತುಳು ಅಕಾಡೆಮಿಯ ಮಾಜಿ ಸದಸ್ಯೆ, ಡಾ| ಸುನೀತಾ ಎಂ.ಶೆಟ್ಟಿ, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಮೂಲ್ಕಿ ಅಧ್ಯಕ್ಷ ಜಯ ಸಿ.ಸುವರ್ಣ, ಬಿಲ್ಲವರ ಅಸೋಸಿಯೇಶನ್‍ನ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್, ಪೂರ್ವಾಧ್ಯಕ್ಷ ಎಲ್.ವಿ ಅಮೀನ್, ಗುಜರಾತ್ ಬಿಲ್ಲವರ ಸಂಘದ ಅಧ್ಯಕ್ಷ ದಯಾನಂದ ಬೋಂಟ್ರಾ ಬರೋಡ, ಅಜೆಕಾರು ಕಲಾಭಿಮಾನಿ ಬಳಗ ಮುಂ¨ಯಿ ಸಂಸ್ಥೆಯ ಸಂಚಾಲಕ ಅಜೆಕಾರು ಬಾಲಕೃಷ್ಣ ಶೆಟ್ಟಿ, ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಯೆಯ್ಯಾಡಿ, ತೋನ್ಸೆ ಸಂಜೀವ ಪೂಜಾರಿ, ಮತ್ತಿತರ ಗಣ್ಯರು ಎ.ಸಿ ಭಂಡಾರೈ ಅವರಿಗೆ ಅಭಿನಂದಿಸಿ ಶುಭೇಚ್ಛ ಹಾರೈಸಿದ್ದಾರೆ.

7 ಅಕಾಡಮಿ-2 ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ:
ಕರ್ನಾಟಕ ಸರಕಾರವು ಒಟ್ಟು 7 ಅಕಾಡಮಿ, 2 ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದ್ದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ| ಕೆ.ಮರುಳಸಿದ್ದಪ್ಪ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ| ವಸುಂಧರಾ ಭೂಪತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಅಧ್ಯಕ್ಷರಾಗಿ ಡಾ| ಅರವಿಂದ ಮಾಲಗತ್ತಿ, ಕರ್ನಾಟಕ ಜಾನಪದ ಅಕಾಡಮಿ ಅಧ್ಯಕ್ಷರಾಗಿ ಟಿ. ಟಾಕಪ್ಪ, ಕರ್ನಾಟಕ ಶಿಲ್ಪಕಲಾ ಅಕಾಡಮಿ ಅಧ್ಯಕ್ಷರಾಗಿ ಕಾಳಾಚಾರ್, ಕರ್ನಾಟಕ ನಾಟಕ ಅಕಾಡಮಿ ಅಧ್ಯಕ್ಷರಾಗಿ ಜೆ. ಲೋಕೇಶ್, ಕರ್ನಾಟಕ ಸಂಗೀತ ಅಕಾಡಮಿ ಅಧ್ಯಕ್ಷರಾಗಿ ಫಯಾಸ್ ಖಾನ್, ಕರ್ನಾಟಕ ಕೊಂಕಣಿ ಅಕಾಡಮಿ ಅಧ್ಯಕ್ಷರಾಗಿ ಆರ್.ಪಿ ನಾಯಕ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

 
More News

ಬೃಹನ್ಮುಂಬಯಿಗೆ ಚಿತ್ತೈಸಿದ ಶ್ರೀ ಜೈನಮಠದ ಪೀಠಾಧಿಪತಿ ಶಾಂತಿಭೂಷಣ ಸ್ವಸ್ತಿ  ಶ್ರೀ ಲಕ್ಷಿ ್ಮಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ
ಬೃಹನ್ಮುಂಬಯಿಗೆ ಚಿತ್ತೈಸಿದ ಶ್ರೀ ಜೈನಮಠದ ಪೀಠಾಧಿಪತಿ ಶಾಂತಿಭೂಷಣ ಸ್ವಸ್ತಿ ಶ್ರೀ ಲಕ್ಷಿ ್ಮಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ
ನಮ್ಮ ಗ್ರಾಮ ನಮ್ಮ ಮಕ್ಕಳು ಮಕ್ಕಳಿಗೆ ಕರಕುಶಲ ವಸ್ತು ಪ್ರಾತ್ಯಕ್ಷಿತೆ ಮಾಹಿತಿ ಶಿಬಿರ-2017
ನಮ್ಮ ಗ್ರಾಮ ನಮ್ಮ ಮಕ್ಕಳು ಮಕ್ಕಳಿಗೆ ಕರಕುಶಲ ವಸ್ತು ಪ್ರಾತ್ಯಕ್ಷಿತೆ ಮಾಹಿತಿ ಶಿಬಿರ-2017
ಸಾವಿನಲ್ಲಿ ರಾಜಕಾರಣ ಮಾಡುವವರು ರಾಕ್ಷಸರು : ಪ್ರಕಾಶ್ ರೈ
ಸಾವಿನಲ್ಲಿ ರಾಜಕಾರಣ ಮಾಡುವವರು ರಾಕ್ಷಸರು : ಪ್ರಕಾಶ್ ರೈ

Comment Here