Saturday 10th, May 2025
canara news

ಕಾವ್ಯಾ ಸಾವು: ಆ. 31ರೊಳಗೆ ಸತ್ಯಾಂಶ ವರದಿ ಬಾರದಿದ್ದರೆ ಜಿಲ್ಲಾ ಬಂದ್

Published On : 11 Aug 2017   |  Reported By : Canaranews Network


ಮಂಗಳೂರು: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕಾವ್ಯಾ ಅಸಹಜ ಸಾವು ಪ್ರಕರಣದ ಬಗ್ಗೆ ಆಗಸ್ಟ್ ಅಂತ್ಯದೊಳಗೆ ಪಾರದರ್ಶಕ ತನಿಖೆ ನಡೆಸಿ ಪೊಲೀಸರು ಸತ್ಯಾಂಶದ ವರದಿ ನೀಡದಿದ್ದರೆ ಸೆ. 10ರೊಳಗೆ ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ಕರೆ ನೀಡಲಾಗುವುದು ಎಂದು ಜಸ್ಟಿಸ್ ಫಾರ್ ಕಾವ್ಯಾ ಹೋರಾಟ ಸಮಿತಿಯ ದಕ್ಷಿಣ ಕನ್ನಡದ ಸಂಚಾಲಕ ದಿನಕರ ಶೆಟ್ಟಿ ಹೇಳಿದರು.

ಪ್ರಕರಣದ ಬಗ್ಗೆ ಪಾರದರ್ಶಕ ತನಿಖೆ ನಡೆಸಬೇಕು ಹಾಗೂ ನ್ಯಾಯ ಒದಗಿಸಬೇಕು, ಕಾವ್ಯಾ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿ ಜಸ್ಟಿಸ್ ಫಾರ್ ಕಾವ್ಯಾ ಹೋರಾಟ ಸಮಿತಿ ಆಶ್ರಯದಲ್ಲಿ ಬುಧವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಬೃಹತ್ ಪ್ರತಿಭಟನ ಸಭೆಯಲ್ಲಿ ಅವರು ಮಾತನಾಡಿದರು.

ಆಳ್ವಾಸ್ ಸಂಸ್ಥೆಯ ಪರವಾಗಿ ಕೆಲವು ಹೋರಾಟ ನಡೆಸಲು ಮುಂದಾಗಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಒಂದೊಮ್ಮೆ ಕಾವ್ಯಾ ನಿಮ್ಮ ಮಗಳಾಗಿದ್ದರೆ ನೀವು ಈ ಸಂಸ್ಥೆಯ ಪರವಾಗಿ ಮಾತನಾಡುತ್ತಿದ್ದಿರಾ? ಈ ಪ್ರಕರಣದಲ್ಲಿ ನ್ಯಾಯ ಬೇಕೆಂದು ವಿದ್ಯಾರ್ಥಿಗಳು ಮಾತ್ರವಲ್ಲದೆ ಸಂಸ್ಥೆಯವರೂ ಒತ್ತಾಯಿಸುತ್ತಿದ್ದಾರೆ. ಅಲ್ಲದೆ ಡಾ| ಮೋಹನ ಆಳ್ವ ಅವರೇ ಸ್ವತಃ ಮಂಪರು ಪರೀಕ್ಷೆಗೂ ಸಿದ್ಧ ಎಂದು ಹೇಳಿದ್ದಾರೆ. ಹಾಗಿರುವಾಗ ಸಂಸ್ಥೆಯ ಪರವಾಗಿ ಹೋರಾಟ ನಡೆಸುವ ಅವಶ್ಯಕತೆ ಏನಿದೆ ಎಂದು ದಿನಕರ ಶೆಟ್ಟಿ ಪ್ರಶ್ನಿಸಿದರು. ಸಂಸ್ಥೆ ಪರ ಹೋರಾಟವನ್ನು ವಾಪಸ್ ಪಡೆಯದಿದ್ದರೆ ಮಂಗಳೂರು ಬಂದ್ಗೆ ಕರೆ ನೀಡಲು ಹಿಂಜರಿಯುವುದಿಲ್ಲ ಎಂದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here