Monday 29th, April 2024
canara news

ಕಲ್ಲಡ್ಕ ಶಾಲೆಗೆ ಅನುದಾನ ಕಡಿತ ವಿಚಾರದಲ್ಲಿ ಗೊಂದಲ ಸೃಷ್ಠಿ: ಖಾದರ್

Published On : 16 Aug 2017   |  Reported By : Canaranews Network


ಮಂಗಳೂರು: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ "ಕಲ್ಲಡ್ಕದ ಎರಡು ಖಾಸಗಿ ಶಾಲೆಗಳಿಗೆ ಅನುದಾನ ಕಡಿತಗೊಳಿಸಿರುವುದು ಸಣ್ಣ ವಿಚಾರ. ಕೆಲವರು ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ," ಎಂದು ಆರೋಗ್ಯ ಮತ್ತು ನಾಗರಿಕ ಪೂರೈಕೆ ಸಚಿವ ಯುಟಿ ಖಾದರ್ ಕಿಡಿಕಾರಿದರು.ಮಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಲ್ಲಡ್ಕದ ಶಾಲೆಗಳಿಗೆ ಅನುದಾನ ಕಡಿತಗೊಳಿಸಿರುವುದು ಧಾರ್ಮಿಕ ಪರಿಷತ್ ಹಾಗೂ ಆ ದೇವಾಲಯದ ಆಡಳಿತ ಮಂಡಳಿಯ ನಿರ್ಧಾರ.

ಇದರಲ್ಲಿ ಮುಖ್ಯಮಂತ್ರಿಯವರ ಪಾತ್ರ ಇಲ್ಲ," ಎಂದು ಹೇಳಿದರು. ಇಂತಹ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು. ಅನುದಾನ ಕಡಿತಗೊಳಿಸಿರುವ ಬಗ್ಗೆ ಮುಜರಾಯಿ ಸಚಿವರಿಗೆ ಪತ್ರ ಬರೆದು ವಿವರಣೆ ಪಡೆದುಕೊಳ್ಳಲಿ ಎಂದವರು ಸಲಹೆ ನೀಡಿದರು. ಆಹಾರ ಇಲಾಖೆಯಿಂದ ಪ್ರತಿ ವಿದ್ಯಾರ್ಥಿಗೆ 15 ಕೆಜಿ ಅಕ್ಕಿ ನೀಡಲಾಗುತ್ತಿದೆ. ಈ ಎರಡೂ ಶಾಲೆಗಳಿಗೆ ಅಕ್ಕಿ ಪೂರೈಕೆ ಮಾಡಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದರೆ ಅಕ್ಕಿ ಪೂರೈಸಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು .

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here