Monday 29th, April 2024
canara news

ಆರೆಸ್ಸೆಸ್ ಶರತ್ ಮಡಿವಾಳ ಹತ್ಯೆ ಪ್ರಮುಖ ಆರೋಪಿಗಳ ಬಂಧನ

Published On : 16 Aug 2017   |  Reported By : Canaranews Network


ಮಂಗಳೂರು: ರಾಜ್ಯಾದ್ಯಂತ ಕುತೂಹಲ ಮೂಡಿಸಿದ್ದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಪೋಲಿಸರು ಯಶಸ್ವಿಯಾಗಿದ್ದಾರೆ.ಕಳೆದ ಒಂದು ತಿಂಗಳಿಂದ ಆರು ವಿಶೇಷ ತಂಡಗಳನ್ನು ರಚಿಸಿದ ಪೋಲಿಸರು ತನಿಖೆ ಆರಂಭಿಸಿದ್ದರು .

ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳ ಪೈಕಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತರನ್ನು ಕಲಂದರ್, ಶಾಫಿ ಹಾಗೂ ಶರೀಫ್ ಎಂದು ಗುರುತ್ತಿಸಲಾಗಿದೆ. ಈ ಬಂಧಿತರು ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿಗೆ ಸೇರಿದ್ದಾರೆ ಎಂದು ತಿಳಿದು ಬಂದಿದೆ.ಜುಲೈ 4 ರಂದು ರಾತ್ರಿ ಬಂಟ್ವಾಳ ತಾಲೂಕಿನ ಬಿ ಸಿ ರೋಡ್ ಬಳಿ ತನ್ನ ಲಾಂಡ್ರಿ ಅಂಗಡಿಯ ಬಾಗಿಲು ಹಾಕಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಶರತ್ ಅವರ ಮೇಲೆ ಮಾರಕಾಸ್ತ್ರಗಳಿಂದ ಕಡಿದು ಪರಾರಿಯಾಗಿದ್ದರು.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶರತ್ ಮಡಿವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಮೃತ ಪಟ್ಟಿದ್ದರು. ಈ ಹತ್ಯೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಶಾಂತಿಯ ವಾತಾವರಣ ನಿರ್ಮಾಣವಾಗಿತ್ತು.ಹತ್ಯೆ ಪ್ರಕರಣದ ಇನ್ನುಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚಣೆ ಮುಂದುವರೆದಿದ್ದು ಪೋಲಿಸರ ಒಂದು ತಂಡ ಚಾಮರಾಜ ನಗರ ಜಿಲ್ಲೆಗೆ ತೆರಳಿ ಆರೋಪಿ ಒಬ್ಬನ ಬಂಧನಕ್ಕೆ ಕಾರ್ಯಚರಣೆ ನಡೆಸಿದ್ದಾರೆ. ಪ್ರಮುಖ ಆರೋಪಿಗಳಲ್ಲಿ ಒಬ್ಬ ಈಗಾಗಲೇ ವೀದೇಶಕ್ಕೆ ಪರಾರಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here