ಮಂಗಳೂರು: ಸಮುದ್ರಕ್ಕೆ ಸೇರುವ 250 ಟಿಎಂಸಿ ಮಳೆ ನೀರಿನಲ್ಲಿ ಸ್ವಲ್ಪ ಪ್ರಮಾಣವನ್ನು ಸಂಗ್ರಹಿಸಿ ಬೆಂಗಳೂರಿಗೆ ಕುಡಿಯಲು ಸರಬರಾಜು ಮಾಡುವ ಪ್ರಸ್ತಾವನೆ ಇನ್ನೂ ಪರಿಶೀಲನೆ ಹಂತದಲ್ಲಿದೆ. ಸಾಧಕ- ಬಾಧಕಗಳ ಅಧ್ಯಯನದ ಬಳಿಕವಷ್ಟೇ ನಿರ್ಧಾರವಾಗಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜನಸಾಮಾನ್ಯರಿಗೆ, ಪ್ರಕೃತಿಗೆ ಧಕ್ಕೆಯಾಗುವ ಯಾವುದೇ ಯೋಜನೆಯನ್ನೂ ಸರಕಾರ ಅನುಷ್ಠಾನಗೊಳಿಸುವುದಿಲ್ಲ. ಸಾಧಕ-ಬಾಧಕಗಳ ಬಗ್ಗೆ ಕರಾವಳಿಯ ಜನರೊಂದಿಗೆ ಚರ್ಚಿಸಿದ ಬಳಿಕವೇ ನಿರ್ಧಾರ ಕೈಗೊಳ್ಳಲಿದೆ ಎಂದವರು ಹೇಳಿದರು.