Wednesday 24th, April 2024
canara news

ಕುಂದಾಪುರ ಗಾಂಧಿ ಮೈದಾನದಲ್ಲಿ ಸ್ವಾತಂತ್ರೋತ್ಸವದ ಆಚರಣೆ

Published On : 17 Aug 2017   |  Reported By : Bernard J Costa


ರಾಷ್ಟ್ರದ ಅಭಿವ್ರದ್ದಿಯಲ್ಲಿ ನಮ್ಮೆಲ್ಲರ ಜವಾಬ್ದಾರಿ ಇದೆ - ಶಿಲ್ಪಾನಾಗ್

ಕುಂದಾಪುರ: ಅಗಸ್ಟ್ ೧೫ ನಾವು ಈಗ ಅನುಭವಿಸುತ್ತಿರುವ ಸ್ವಾವಂತ್ರ್ಯ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಂದ ಗಳಿಸಿದ್ದಾಗಿದೆ. ಈ ಸ್ವಾತಂತ್ರ್ಯವನ್ನು ಕಾಪಾಡಬೇಕು. ಮಾತ್ರವಲ್ಲದೆ ರಾಷ್ಟ್ರದ ಉಜ್ವಲ ಭವಿಷ್ಯವನ್ನು ಅಭಿವೃದ್ಧಿಯ ಪಥದೆಡೆಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದು ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಅವರು ಹೇಳಿದರು ಅವರು ಕುಂದಾಪುರ ಗಾಂಧಿ ಮೈದಾನದಲ್ಲಿ ಮಂಗಳವಾರ ೭೧ ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕುಂದಾಪುರ ಗಾಂಧಿ ಮೈದಾನದಲ್ಲಿ ತಾ.ಪಂ., ಪುರಸಭೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಇವರ ಆಶ್ರಯದಲ್ಲಿ ನೆಡೆದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣಗೈದು, ಪಥ ಸಂಚಲನದ ವಂದನೆ ಸ್ವೀಕರಿಸಿ ಅವರು ಸ್ವಾತಂತ್ರ್ಯ ಸಂದೇಶವನ್ನು ನೀಡಿದರು.

 

 

 

 

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ತಾ.ಪಂ. ಅಧ್ಯಕ್ಷೆ ಜಯಶ್ರೀ ಮೊಗವೀರ ವಹಿಸಿದ್ದರು. ಅತಿಥಿಗಳಾಗಿ ಪುರಸಭೆಯ ಅಧ್ಯಕ್ಷೆ ವಸಂತಿ ಸಾರಂಗ, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ವಿಕಾಸ್ ಹೆಗ್ಡೆ, ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರವೀಣ್ ಎಚ್.ನಾಯಕ್ , ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಕುಂದಾಪುರ ತಹಶೀಲ್ದಾರ್ ಜಿ.ಎಂ.ಬೋರ್ಕರ್, ಪುರಸಭೆಯ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಪುರಸಭೆಯ ಉಪಾಧ್ಯಕ್ಷ ರಾಜೇಶ್ ಕಾವೇರಿ, ಪುರಸಭೆಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿವಿಧ ಶಾಲಾ ಮಕ್ಕಳ ಸ್ಕೌಟ್ಸ್ ಗೈಡ್ಸ್, ಸೇವಾದಳ, ಗೃಹರಕ್ಷಕ ದಳ, ಅಗ್ನಿಶಾಮಕ ದಳ, ಎನ್. ಸಿ.ಸಿ., ಎನ್.ಎಸ್.ಎಸ್, ಹಾಗೂ ಪೊಲೀಸ್ ಪಡೆಯಿಂದ ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ ನಾಸಿರ್ ಹುಸೇನ್ ನೇತೃತ್ವದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ಈ ಪಥ ಸಂಚಲನಕ್ಕೆ ಹಲವು ವರ್ಷಗಳಿಂದ ನಗರದ ಸಂತ ಜೋಸೆಫ್ ಹೈಸ್ಕೂಲಿನ ಬ್ಯಾಂಡ್ ವಾದನ ಈ ವರ್ಷವೂ ಜನರ ಆಕರ್ಷಣೆಗೊಂಡಿತು.

ತಾಲೂಕಿನ ಸರಕಾರಿ ಶಾಲೆಗಳಲ್ಲಿ ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸರಕಾರಿ ಪ.ಪೂ.ಕಾಲೇಜು ಶಂಕರನಾರಾಯಣದ ಶ್ರೀವತ್ಸ ರಾವ್, ಸರಕಾರಿ ಪ.ಪೂ.ಕಾಲೇಜು ಸಿದ್ಧಾಪುರದ ಪ್ರಣೀತ್ ಶೆಟ್ಟಿ ಹಾಗೂ ಸರಕಾರಿ ಪ.ಪೂ.ಕಾಲೇಜು ಬಿದ್ಕಲ್ಕಟ್ಟೆಯ ಶಶಾಂಕ್ ಅವರಿಗೆ ಸರಕಾರದ ವತಿಯಿಂದ ಲ್ಯಾಪ್ ಟಾಪನ್ನು ನೀಡಲಾಯಿತು. ಕುಂದಾಪುರ ಪುರಸಭೆಗೆ ಭಾರತ ಸರಕಾರದ ಸ್ವತ್ಛ ಭಾರತ ಮಿಷನಿನ ಮುಕ್ತ ಶೌಚಾಲಯಪ್ರಶಸ್ತಿಯನ್ನು ಹಸ್ತಾಂತರಿಸಲಾಯಿತು.

ಕುಂದಾಪುರ ತಹಶೀಲ್ದಾರ್ ಜಿ.ಎಂ.ಬೋರ್ಕರ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರ್ವಹಿಸಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here